ಹೆಬ್ರಿ: ವೈದ್ಯಕೀಯ ಸೇವೆಗೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಪಂಚಾಯಿತಿ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ ಬಂಗೇರ ಹೇಳಿದರು.
ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್ ಉಡುಪಿ, ಗ್ರಾಪಂ ಹೆಬ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಸಹಕಾರದೊಂದಿಗೆ ಶುಕ್ರವಾರ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅಧ್ಯಕ್ಷ ನಾಗೇಶ್ ನಾಯಕ್ ಸೀತಾನದಿ ಕಾರ್ಯಕ್ರಮ ಉದ್ಘಾಟಿಸಿದರು. ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ ಕುಮಾರ್, ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮಾಮಣಿ, ಡಾ.ಅರ್ಪಿತಾ ಶೆಟ್ಟಿ, ನೇತ್ರ ತಜ್ಞೆ ಡಾ.ಶ್ರುತಿ, ಲಯನ್ಸ್ ಜಿಲ್ಲಾ ಪ್ರಮುಖರಾದ ಟಿ.ಜಿ.ಆಚಾರ್ಯ, ಕಾರ್ಯದರ್ಶಿ ಹರೀಶ್ ಕುಮಾರ್ ಶೆಟ್ಟಿ ನಾಡ್ಪಾಲು, ಕೋಶಾಧಿಕಾರಿ ಆಶಾ ಬಿ.ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರನಾಥ ಶೆಟ್ಟಿ, ಪ್ರಸಾದ್ ರೈ, ಪ್ರಸಾದ್ ನೇತ್ರಾಲಯ ಸಾರ್ವಜನಿಕ ಸಂಪರ್ಕಾಧಿಕಾರಿ ಮೋಹನದಾಸ್, ನೇತ್ರಾಧಿಕಾರಿ ಪ್ರವೀಣ್ ಉಪಸ್ಥಿತರಿದ್ದರು. ಚಿದಾನಂದಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಕುಮಾರ್ ಶೆಟ್ಟಿ ವಂದಿಸಿದರು.