raichur 
ಜಿಲ್ಲೆ

ಸೆ.28 ರಂದು ಉಚಿತ ಆರೋಗ್ಯ ತಪಾಸಣೆ

Raichur - Reporter - Rachhai Swamy

ರಾಯಚೂರು ವಿಶ್ವ ಹೃದಯ ದಿನದ ಅಂಗವಾಗಿ ನಗರದ ವಿಜಯ ಪಾಲಿಕ್ಲಿನಿಕ್ ಮತ್ತು ನರ್ಸಿಂಗ್ ಹೋಮ್ ವತಿಯಿಂದ ಸೆ.28 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಅಜಿತ್.ವಿ.ಕುಲಕರ್ಣಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ದತಿ, ಶಾರೀರಿಕ ವ್ಯಾಯಾಮ ಕಡಿಮೆಯಾಗಿರುವುದು ಸೇರಿದಂತೆ ಇತರೆ ಕಾರಣಗಳಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ನಮ್ಮ ಕ್ಲಿನಿಕ್‌ನಲ್ಲಿಯೇ 40 ವರ್ಷ ವಯಸ್ಸಿನ ಕೆಳಗಿರುವವರು ಹೆಚ್ಚಾಗಿ ಹೃದಯ ಸಂಬಂಧಿ ತಪಾಸಣೆಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಜನರು ನಿರ್ಲಕ್ಷೃವಹಿಸದೇ ಆರೋಗ್ಯದ ಕಡೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಈ ಉಚಿತ ಆರೋಗ್ಯ ಶಿಬಿರದಲ್ಲಿ ಉಚಿತ ತಪಾಸಣೆ, ಇಸಿಜಿ, ಶುಗರ್ ಟೆಸ್ಟ್, ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ಅಮರೇಶ ಇದ್ದರು.