ಜಿಲ್ಲೆ

ಪೌರಕಾರ್ಮಿಕರಿಗೆ ಆರೋಗ್ಯ ಉಚಿತ ತಪಾಸಣೆ

ಮೈಸೂರು: ವಿಷ್ಣುಮೂರ್ತಿ ರೇಖಾ ಮೂರ್ತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಡಿ.20ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಪುರಭವನದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಡಾ.ಸುಶ್ರುತ ಗೌಡ ತಿಳಿಸಿದರು.

ಶಾಸಕ ಕೆ.ಹರೀಶ್‌ಗೌಡ ಶಿಬಿರಕ್ಕೆ ಚಾಲನೆ ನೀಡುವರು. ಶಿಬಿರದಲ್ಲಿ ಶುಗರ್, ಬಿಪಿ ಹಾಗೂ ಇನ್ನಿತರ ವಿಶೇಷ ಆರೋಗ್ಯ ತಪಾಸಣೆ ನಡೆಸಿ, ಅನಾರೋಗ್ಯ ಕಂಡುಬಂದಲ್ಲಿ ಸಲಹೆ-ಸೂಚನೆ ನೀಡಲಾಗುವುದು. ನಗರದ ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ಶಿಬಿರದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖಂಡರಾದ ರಾಜು, ಮಾರ್ಬಳ್ಳಿ ಕುಮಾರ್ ಇದ್ದರು.