ಜಿಲ್ಲೆ

ಹೃದಯ ಉಚಿತ ತಪಾಸಣೆ

Davangere - Desk - Mahesh Babu E

ಕೊಂಡ್ಲಹಳ್ಳಿ: ಖ್ಯಾತ ನೇತ್ರ ತಜ್ಞ ಡಾ.ಕೆ.ನಾಗರಾಜ್ ಸ್ಮರಣಾರ್ಥ ಗ್ರಾಮದ ಎಂಆರ್‌ಟಿ ಗ್ರಾಮಾಂತರ ಕಣ್ಣಿನ ಆಸ್ಪತ್ರೆಯಲ್ಲಿ ಸೆ.6ರಂದು ಹೃದಯ ಉಚಿತ ತಪಾಸಣೆ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಎಸ್‌ಜೆಎಂ ಹಾರ್ಟ್ ಸೆಂಟರ್, ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ವಾಸವಿ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿ, ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ವತಿಯಿಂದ ಶಿಬಿರ ಆಯೋಜಿಸಲಾಗಿದೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ಆಯೋಜಿಸಲಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯಿತಿ ಸದಸ್ಯ ವಿ.ಪಾಲಾಕ್ಷ ತಿಳಿಸಿದ್ದಾರೆ.