ಮಂಡ್ಯ: ಐಬಿಪಿಎಸ್‌ನಿಂದ ನಡೆಸಲಾಗುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಆ.16ರಿಂದ 29ರವರೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸ್ಟಡಿ ಸರ್ಕಲ್ ಕಾರ್ಯಕ್ರಮದ ಮೂಲಕ ಉಚಿತವಾಗಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಇರಲಿದೆ. ಆಸಕ್ತರು ಆ.21ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ದೂ.ಸಂ 08223-295124 ಅಥವಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಡ್ಯ ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.