ಮಂಡ್ಯ: ಪ್ರಸಕ್ತ ಸಾಲಿನ ಜಿಲ್ಲೆಯ ಗ್ರಾಮಾಂತರ ಪ್ರದೇಶದ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ಗುಡಿ ಕೈಗಾರಿಕೆಯಲ್ಲಿ ತೊಡಗಿರುವ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಇಲಾಖೆ ಸೌಲಭ್ಯವನ್ನು ಪಡೆಯಲು ಉಚಿತವಾಗಿ ಹೊಲಿಗೆಯಂತ್ರ ಹಾಗೂ ಪವರ್‌ಟೂಲ್ಸ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‌ಸೈಟ್ https://mandya.nic.in ಮೂಲಕ ಅ.10ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂ 08232-221566 ಅಥವಾ ಸಂಬಂದಪಟ್ಟ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿ/ಉಪ ನಿರ್ದೇಶಕರ ಕಚೇರಿ, ಗ್ರಾಮೀಣ ಕೈಗಾರಿಕೆಗಳು (ಖಾದಿ ಮತ್ತು ಗ್ರಾಮೋದ್ಯೋಗ), ಮಂಡ್ಯ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.