ಜಿಲ್ಲೆ

ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆ ಸ್ವಾವಲಂಬಿ : ಸುಲೋಚನಾ ಜಿ.ಕೆ.ಭಟ್ ಮೆಚ್ಚುಗೆ

ಸೌಮ್ಯ ಆರ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ವಗ್ಗ ವಲಯದ ವಾಮದಪದವಿನಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿ ತರಗತಿಯನ್ನು ಪ್ರೇರಣ ಜ್ಞಾನ ವಿಕಾಸ ಕೇಂದ್ರದಲ್ಲಿ ಪ್ರಾರಂಭಿಸಲಾಯಿತು.

ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್ ಉದ್ಘಾಟಿಸಿ ಮಾತನಾಡಿ, ಮಹಿಳೆ ಸ್ವಉದ್ಯೋಗ ಮಾಡಿ ಹೇಗೆ ಮನೆ ಅಭಿವೃದ್ಧಿಪಡಿಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲಿಸಿಕೊಟ್ಟಿದೆ ಎಂದರು.

ವಾಮದಪದವು ಗ್ರಾಪಂ ಮಾಜಿ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿ, ಮಹಿಳಾ ಜ್ಞಾನವಿಕಾಸ ಕೇಂದ್ರ ಕರ್ನಾಟಕ ರಾಜ್ಯದಲ್ಲಿ ಎಲ್ಲ ಕಡೆ ವಿಸ್ತರಣೆಯಾಗಿದೆ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ನವೀನ್ ಚಂದ್ರಶೆಟ್ಟಿ, ಒಕ್ಕೂಟ ಅಧ್ಯಕ್ಷೆ ಅನಿತಾ ಪ್ರಭು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಸವಿತಾ, ಹೊಲಿಗೆ ತರಬೇತಿ ಶಿಕ್ಷಕಿ ಪವಿತ್ರಾ, ಸೇವಾಪ್ರತಿನಿಧಿ ಮೋಹನ್‌ದಾಸ್ ಗಟ್ಟಿ, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರದ ಸಂಯೋಜಕಿ ಗುಣವತಿ ಸ್ವಾಗತಿಸಿದರು. ಸದಸ್ಯೆ ಕವಿತಾ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.