ಜಿಲ್ಲೆ

ಧರ್ಮಾತೀತ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ

Mysuru - Desk - Naveen Kumar H P

ಅರಕಲಗೂಡು : ಜ್ಯಾತ್ಯಾತೀತ ಹಾಗೂ ಧರ್ಮಾತೀತವಾಗಿ ಪರಕೀಯರ ವಿರುದ್ಧ ಹೋರಾಟ ಮಾಡಿದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಆದರೆ ಇಂದು ಜಾತಿ ಪದ್ಧತಿ ಹೆಚ್ಚುತ್ತಿರುವುದು ಬೇಸರದ ಸಂಗತಿ ಎಂದು ಶಾಸಕ ಎ.ಮಂಜು ಹೇಳಿದರು.


ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರೃ ದಿನಾಚರಣೆಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮ, ವರ್ಗಗಳು ಒಟ್ಟಾಗಿ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಬಳಿಕ, ಜಾತಿಯ ವಿಷವರ್ತುಲ ಬಿಗಡಾಯಿಸುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದರು.


ತಹಸೀಲ್ದಾರ್ ಕೆ.ಸಿ.ಸೌಮ್ಯಾ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದರು. ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗೌರವಿಸಲಾಯಿತು. ತಾಪಂ ಇಒ ಪ್ರಕಾಶ್, ಸಿಪಿಐ ವಸಂತ್, ಬಿಇಒ ನಾರಾಯಣ್, ಪಪಂ ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾವಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ವಿದ್ಯಾರ್ಥಿಗಳು ಮತ್ತು ವಿವಿಧ ಸ್ಥಬ್ದ ಚಿತ್ರಗಳ ಆಕರ್ಷಕ ಮೆರವಣಿಗೆ ನಡೆಯಿತು. ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.