ಮಸ್ಕಿ ತಹಸೀಲ್ದಾರ್ ಕವಿತಾ ಆರ್.ಗೆ ಹಿಂದು ಕಾರ್ಯಕರ್ತರು ಶುಕ್ರವಾರ ಮನವಿ ಸಲ್ಲಿಸಿದರು.  
ಜಿಲ್ಲೆ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅನಿಸಿಕೆ

Raichur

ಮಸ್ಕಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಹಿಂದು ಸಮಾಜದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ಹಿಂದು ಕಾರ್ಯಕರ್ತ ಕನ್ಹಯ್ಯಲಾಲ್‌ರನ್ನು ಹತ್ಯೆ ಮಾಡಿದ್ದು ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸದ ಕೆಲವು ಹಿಂದೂ ವಿರೋಧಿಗಳು ಕನ್ಹಯ್ಯಲಾಲ್‌ರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಯ ವಿಡಿಯೋ ಚಿತ್ರಿಕರಿಸಿ ಪ್ರಧಾನ ಮಂತ್ರಿಗೂ ಕೊಲೆ ಬೆದರಿಕೆ ಹಾಕಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರಪತಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕವಿತಾ ಆರ್.ಗೆ ಸಲ್ಲಿಸಲಾಯಿತು. ಪ್ರಮುಖರಾದ ಡಾ.ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್.ದಿವಟರ್, ಅಪ್ಪಾಜಿಗೌಡ ಪಾಟೀಲ್, ಮೌನೇಶ ನಾಯಕ, ಶರಣಯ್ಯ ಸೊಪ್ಪಿಮಠ, ಮಲ್ಲಯ್ಯ ಅಂಬಾಡಿ, ಬಸವರಾಜ ಬುಕ್ಕಣ್ಣ ಇತರರು ಇದ್ದರು.