ಮಂಗಳೂರು: ಸ್ವಾತಂತ್ರೃ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಅವರನ್ನು ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಸನ್ಮಾನಿಸಲಾಯಿತು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಹಿರಿಯ ಪತ್ರಕರ್ತರಾದ ಕೆ.ಆನಂದ ಶೆಟ್ಟಿ ,ಮನೋಹರ ಪ್ರಸಾದ್ , ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ , ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್. ಉಪಸ್ಥಿತರಿದ್ದರು.