Vector illustration in HD very easy to make edits. 
ಜಿಲ್ಲೆ

ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಮಾಂಜರಿ: ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಟನೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಹೊರವಲಯದಲ್ಲಿ ಭಾನುವಾರ ನಡೆದಿದೆ.

ಹುಸೇನಸಾಬ್​ ದಸ್ತಗಿರ ಪರೀಟ (25) ಕೊಲೆಯಾದವ. ಇಮ್ಮಿಯಾಜ್​ ಶೇಗಡಿ (25) ಕೊಲೆ ಮಾಡಿದವನು. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ನಿವಾಸಿಗಳಾದ ಇಬ್ಬರೂ ಅಂಕಲಿ ಗ್ರಾಮ ಬಳಿಯ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಸಾಂಗಲಿಗೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದ ಗಲಾಟೆ ವಿಕೋಪಕ್ಕೆ ತೀರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡ ಅಂಕಲಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಚಿಕ್ಕೋಡಿ ಸಿಪಿಐ ವಿಶ್ವನಾಥ ಚೋಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.