ಕಂಪ್ಲಿಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯ ವಸಂತರಾಜ ಕಹಳೆ ಮಾತನಾಡಿದರು. ಪದಾಧಿಕಾರಿಗಳಾದ ಇ.ಧನಂಜಯ, ಎ.ಎಸ್.ಮಲ್ಲಪ್ಪ, ಶಾಂತಪ್ಪ ಪೂಜಾರಿ, ಮಲ್ಲಿಕಾರ್ಜುನ, ಬಸಪ್ಪ ಮೆಟ್ರಿ, ಎಸ್.ಬಸವರಾಜ ಇದ್ದರು. 
ಜಿಲ್ಲೆ

ಆ.11ರಿಂದ ಅನಿರ್ದಿಷ್ಟಾವಧಿ ಧರಣಿ

Kopala - Desk - Eraveni

ಕಂಪ್ಲಿ: ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಸಮೀಕ್ಷಾ ವರದಿಯನ್ನು ಜು.30ರೊಳಗೆ ಸಲ್ಲಿಸಬೇಕು. ವಿಧಾನಮಂಡಲ ಅಧಿವೇಶನದಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ವಿರೋಧ ಪಕ್ಷಗಳು ಒತ್ತಾಯಿಸುವ ಮೂಲಕ ಬದ್ಧತೆ ತೋರಬೇಕೆಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯ ವಸಂತರಾಜ ಕಹಳೆ ಒತ್ತಾಯಿಸಿದರು.

ಪಟ್ಟಣದ ಅತಿಥಿಗೃಹ ಆವರಣದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮಂಗಳವಾರ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜನಸಂಖ್ಯೆಗನುಗುಣವಾಗಿ ಮೀಸಲಾತಿ ಬೇಡಿಕೆ ಮೂರು ದಶಕಗಳದ್ದಾಗಿದೆ. 2024ರ ಆ.1ರಂದು ಸರ್ವೋಚ್ಚ ನ್ಯಾಯಾಲಯ ಪರಿಶಿಷ್ಟರ ಬೇಡಿಕೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬಹುದೆಂದು ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ದೂರಿದರು.

ಸರ್ಕಾರ ಆ.11ರಿಂದ ಆರಂಭಗೊಳ್ಳಲಿರುವ ಮಳೆಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ತೀರ್ಮಾನ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಆ.11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು. ಪದಾಧಿಕಾರಿಗಳಾದ ಇ.ಧನಂಜಯ, ಎ.ಎಸ್.ಮಲ್ಲಪ್ಪ, ಶಾಂತಪ್ಪ ಪೂಜಾರಿ, ಮಲ್ಲಿಕಾರ್ಜುನ, ಬಸಪ್ಪ ಮೆಟ್ರಿ, ಎಸ್.ಬಸವರಾಜ ಇತರರಿದ್ದರು.