ಮಾನ್ವಿ: ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಿದ ಕೀರ್ತಿ ಸಲ್ಲುತ್ತದೆ ಎಂದು ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ. ಜೀವಾನೇಶ್ವರಯ್ಯ ಹೇಳಿದರು.
ಪಟ್ಟಣದ ಕೆ.ಪಿ.ಎಸ್.ವಿ.ಎಸ್. ಆಯುರ್ವೇದ ವೈದ್ಯಕೀಯ ಮೆಡಿಕಲ್ ಕಾಲೇಜು ಆವರಣದಲ್ಲಿ ಶುಕ್ರವಾರ ಕಲ್ಮಠ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಜನ್ಮದಿನದ ನಿಮಿತ್ತ ಎಸ್‌ವಿವಿ ಟ್ರಸ್ಟ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ ರಿಮ್ಸ್ ರಕ್ತನಿಧಿ ಭಂಡಾರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದ್ದು, ಹೃದಯ ಸಂಬಂಧಿಸಿದ ಕಾಯಿಲೆಗಳು ಬರುವುದಿಲ್ಲ ಎಂದರು. ಗರ್ಭಿಣಿಯರು, ಅಪಘಾತ, ರಕ್ತಹೀನತೆ ಇದ್ದವರಿಗೆ ಅನುಕೂಲವಾಗಲಿದೆ ಎಂದರು. ಶಿಬಿರದಲ್ಲಿ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಹಾಗೂ ರಕ್ತದಾನಿಗಳು ರಕ್ತದಾನ ಮಾಡಿದರು.