ಜಿಲ್ಲೆ

ವಿದೇಶಿಗರಿಂದ ನಮ್ಮ ಸಂಸ್ಕೃತಿ ಅನುಕರಣೆ

ಪ್ರಶಾಂತ ಹೂಗಾರ

ಚಿಕ್ಕೋಡಿ: ವಿಶ್ವಶಾಂತಿಗಾಗಿ ಕೆರೂರ ಗ್ರಾಮಸ್ಥರು ಜಗದ್ಗುರು ಡಾ. ಶಿವಾನಂದ ಭಾರತಿ ಶ್ರೀಗಳ ನೇತತ್ವದಲ್ಲಿ ವೇದಾಂತ ಪರಿಷತ್ ಆಯೋಜಿಸಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ತಾಲೂಕಿನ ಕೇರೂರ ಗ್ರಾಮದ ಶ್ರೀ ಸದ್ಗುರು ಶಂಕರಾನಂದ ಪರಮಹಂಸ ಶಿಕ್ಷಣ ಸಂಸ್ಥೆಯಡಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಹಾಗೂ 42 ವೇದಾಂತ ಪರಿಷತ್ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಡಿನ ಭವ್ಯವಾದ ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ವಿದೇಶಿಗರು ಅನುಸರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಡಾ. ಶಿವಾನಂದ ಭಾರತಿ ಶ್ರೀ ದಿವ್ಯ ಸಾನ್ನಿಧ್ಯ ವಹಿಸಿದ್ದರು. ನೀಡಸೋಸಿ ಪಂಚಮ ಶಿವಲಿಂಗೇಶ್ವರ ಶ್ರೀ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀ, ಶೇಗುಣಸಿ ವಿರಕ್ತಮಠದ ಡಾ.ಮಹಾಂತಪ್ರಭು ಶ್ರೀ ಸಾನ್ನಿಧ್ಯ ವಹಿಸಿದ್ದರು. ಸಿ.ಬಿ.ಕೆ.ಎಸ್.ಎಸ್.ಕೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ವೀರೇಂದ್ರ ಪಾಟೀಲ, ಬಾಳಗೌಡಾ ರೇಂದಾಳೆ, ಭೀಮಗೌಡಾ ಪಾಟೀಲ, ಮಲ್ಲಿಕಾರ್ಜುನ ಪಾಟೀಲ, ಚನಗೌಡಾ ಪಾಟೀಲ, ಬಿ.ಎನ್. ಪಾಟೀಲ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎ.ಪಾಟೀಲ ಇತರರಿದ್ದರು.