ಧಾರವಾಡ: ಉದ್ಯಾನ ಕಲಾ ಪ್ರಿಯರಿಗಾಗಿ ಹುಬ್ಬಳ್ಳಿಯ ಇಂದಿರಾ ಗಾಂಧಿ ಗಾಜಿನ ಮನೆ ಆವರಣದಲ್ಲಿ ಅ. 3, 4ರಂದು ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಪ್ರದರ್ಶನದ ಅಂಗವಾಗಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಸ್ಥೆ ಹಾಗೂ ಮನೆಗಳ ಉದ್ಯಾನಗಳ ಸ್ಪರ್ಧೆಯನ್ನು ಏರ್ಪಡಿಸಲಾಗುವುದು.
ಆಸಕ್ತರು ಸೆ. 15ರೊಳಗೆ ತೋಟಗಾರಿಕೆ ಇಲಾಖೆ ಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.