ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಮಹಾನಗರ ಜೆಡಿಎಸ್ ಮಂಗಳವಾರ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.
ಸರ್ಕಾರ ತಕ್ಷಣ ಏರಿಕೆ ಮಾಡಿರುವ ಪೆಟ್ರೋಲ್ ಡೀಸೆಲ್ ದರವನ್ನು ಕೂಡಲೆ ಕೈ ಬಿಡುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯಲಿದೆ. ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿದೆ.