ಎನ್.ಆರ್.ಪುರ: ತಾಲೂಕು ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವುದರಿಂದ ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಡಿಎಸ್‌ಎಸ್‌ನ ಜಿಲ್ಲಾ ಸಂಘಟನಾ ಸಂಚಾಲಕ ಡಿ.ರಾಮು ಹೇಳಿದರು.
ತಾಲೂಕು ಕಚೇರಿ ಎದುರು ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ತೆರಳಿ ಮಾತನಾಡಿ, ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆಗೆ ತೀವ್ರ ತೊಂದರೆಯಾಗಿದೆ. ಇದರಿಂದ ಗ್ರಾಮ ಆಡಳಿತಾಧಿಕಾರಿಗಳ ನ್ಯಾಯಬದ್ಧ ಬೇಡಿಕೆಗಳನ್ನು ಸರ್ಕಾರ ಶೀಘ್ರವೇ ಈಡೇರಿಬೇಕು. ಜನ ಸಾಮಾನ್ಯರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಗ್ರಾಮ ಆಡಳಿತಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಕಂದಾಯ ಸಚಿವರು ಆದೇಶಿಸಬೇಕು ಎಂದು ಒತ್ತಾಯಿಸಿದರು.
ಶೃಂಗೇರಿ ಕ್ಷೇತ್ರ ಮಹಿಳಾ ಸಂಘಟನೆ ಸಂಚಾಲಕಿ ವಿಮಲಾ, ಕ್ಷೇತ್ರ ಕಾರ್ಯದರ್ಶಿ ಜಾರ್ಜ್, ತಾಲೂಕು ಮಹಿಳಾ ಸಂಚಾಲಕಿ ವಿಜಯಕುಮಾರಿ, ನಗರ ಸಂಚಾಲಕ ಪಿಕಪ್‌ಚಂದ್ರು, ಆಶಾಮಧು, ಲಾರೆನ್ಸ್, ಶ್ರೀನಿವಾಸ್,ಸಿಜು ಇದ್ದರು.