ಜಿಲ್ಲೆ

ಶ್ರೀ ಕ್ಷೇತ್ರ ಕೈವಾರ ಮಠದಲ್ಲಿ ಹುಣ್ಣಿಮೆ ರಥೋತ್ಸವ

ಚಿಂತಾಮಣಿ: ತಾಲೂಕಿನ ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ವೈಶಾಖ ಮಾಸದ ಹುಣ್ಣಿಮೆಯ ಅಂಗವಾಗಿ ಸೋಮವಾರ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಶ್ರೀದೇವಿ, ಭೂದೇವಿ ಸಮೇತ ಶ್ರೀ ಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆ ನೇರವೇರಿಸಿ ರಥೋತ್ಸವ ನಡೆಸಲಾಯಿತು. ಅಧಿಕ ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಭಾಗಿಯಾಗಿದ್ದು, ನಾದ ಸುಧಾರಸ ವೇದಿಕೆಯಲ್ಲಿ ಅಖಂಡ ಸಂಕೀರ್ತನೆ ನಡೆಯಿತು. ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು.

ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ

ತಾಲೂಕಿನ ಆಲಂಬಗಿರಿ ಕಲ್ಕಿ ಶ್ರೀ ಲಕ್ಷ್ಮೀವೆಂಕಟರವಣ ದೇವಾಲಯದಿಂದ 1 ಕಿ.ಮೀ ದೂರದ ಆಲಂಬಗಿರಿ ಬೆಟ್ಟದವರೆಗೂ ಸಂಕೀರ್ತನಾ ಗಿರಿಪ್ರದಕ್ಷಿಣೆ ಮಾಡಲಾಯಿತು. ಧರ್ಮಾಧಿಕಾರಿ ಡಾ. ಎಂ.ಆರ್.ಜಯರಾಮ್ ಭಾಗವಹಿಸಿದ್ದರು.

.