ಜಿಲ್ಲೆ

ಯಾದಪುರದಲ್ಲಿ ಹುಣ್ಣಿಮೆ ಮಹೋತ್ಸವ

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಸುಪ್ರಸಿದ್ಧ ಯಾತ್ರ ಸ್ಥಳವಾದ ಸುಕ್ಷೇತ್ರ ಯಾದಪುರದ ಶ್ರೇ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಹುಣ್ಣಿಮೆ ಮಹೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ತ್ರಿಕಾಲ ಪೂಜೆ ಸೇರಿದಂತೆ ವಿವಿಧ ಅಭಿಷೇಕ ಪೂಜಾ ಕಾರ್ಯಗಳು ನೆರವೇರಿದವು. ಅಲ್ಲದೆ ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

ಸಹಸ್ರಾರು ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ಹುಣ್ಣಿಮೆ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅರಸೀಕೆರೆಯಿಂದ ಯಾದಪುರದವರೆಗೂ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು.