ಜಿಲ್ಲೆ

ಜಿ.ಎ.ಲೋಕೇಶ್ ನೂತನ ಡಿಡಿಪಿಐ: ಕಚೇರಿಯಲ್ಲಿ ಅಧಿಕಾರ ಸ್ವೀಕಾರ

ಕೆ.ಎನ್.ರಾಘವೇಂದ್ರ

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ ಜಿ.ಎ.ಲೋಕೇಶ್ ನೇಮಕವಾಗಿದ್ದಾರೆ. ಜಿಲ್ಲೆಯಲ್ಲಿ ಅಕ್ಷರ ದಾಸೋಹ ಶಿಕ್ಷಣ ಅಧಿಕಾರಿಯಾಗಿ ಲೋಕೇಶ್ ಕಾರ್ಯ ನಿರ್ವಹಿಸುತ್ತಿದ್ದರು.

ನಗರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಲೋಕೇಶ್, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತದಲ್ಲಿವೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚು ಮಾಡುವ ಕಡೆ ಗಮನ ಹರಿಸಲಾಗುವುದು. ಶಾಲೆಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸುವ ಕೆಲಸ ಮಾಡಲಾಗುವುದು. ಎಸ್‌ಎಸ್‌ಎಲ್ಸಿ ಫಲಿತಾಂಶ ಉತ್ತಮ ಪಡಿಸಲು ಕ್ರಮ ವಹಿಸಲಾಗುವುದು ಎಂದರು.

ಸರ್ವ ಶಿಕ್ಷಣ ಅಭಿಯಾನ ಉಪ ಸಮನ್ವಯ ಅಧಿಕಾರಿ ಬಿ.ಚಂದ್ರಶೇಖರ್, ಅಕ್ಷರ ದಾಸೋಹ ಶಿಕ್ಷಣ ಅಧಿಕಾರಿ ರವಿಕುಮಾರ್, ಸಂಜಯ್, ರಾಜೇಗೌಡ, ಕೃಷ್ಣಪ್ಪ, ಮಂಜೇಗೌಡ ಇತರರಿದ್ದರು.