ಮಂಗಳೂರು : ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಹಾಗೂ ಪ್ರೇಮ ಗೀತೆಯನ್ನು ನಟ ನಿರ್ದೇಶಕ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ, ಮಧು ಸುರತ್ಕಲ್, ಉದಯ ಆಳ್ವ, ಅಥರ್ವ ಪ್ರಕಾಶ್,
ನಾಯಕ ನಟ ಶರಣ್ ಶೆಟ್ಟಿ ಉಪಸ್ಥಿತರಿದ್ದರು.
ಚಿತ್ರಕ್ಕೆ ಡೊಲ್ಪಿನ್ ಕೊಳಲಗಿರಿ ಸಂಗೀತ ನೀಡಿದ್ದು, ಅರುಣ್ ಲೂಯಿಸ್ ಸಾಹಿತ್ಯ ಬರೆದಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ. ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಗಿರೀಶ್ ಶೆಟ್ಟಿ ಕಟೀಲು ಮುಂತಾದವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಮಾ.22ರಂದು ಕರಾವಳಿ ಜಿಲ್ಲೆಯಾದ್ಯಂತ ಗಬ್ಬರ್‌ಸಿಂಗ್ ತೆರೆ ಕಾಣಲಿದೆ . ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ , ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ.
ಗಬ್ಬರ್‌ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆ ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ ಎಂದು ಪ್ರಕಟಣೆ ತಿಳಿಸಿದೆ.