ಜಿಲ್ಲೆ

ಸ್ವಾಮಿ ವಿವೇಕಾನಂದ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ

Gadag - Shivanand Hiremath

ಹುಲಕೋಟಿ: ಸ್ಥಳೀಯ ಸ್ವಾಮಿ ವಿವೇಕಾನಂದ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಪ್ರಕೃತಿ ಚಿಕಿತ್ಸೆ ಯೋಗ ವಿಜ್ಞಾನ ಸಂಸ್ಥೆಯ ಸಹಯೋಗದ ಅಡಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಕೃತಿ ಹಾಗೂ ಯೋಗ ವಿಜ್ಞಾನ ಸಂಸ್ಥೆಯ ವೈದ್ಯರಾದ ಡಾ: ಪೂಜಾ ಕರಕನಗೌಡರ ಸಸಿಗೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳನ್ನು ಮಾಡಿಸಿ ಅದರ ಪ್ರಯೋಜನಗಳನ್ನು ವಿವರಿಸಿದರು.

 ಕಾರ್ಯಕ್ರಮದಲ್ಲಿ ಆರ್ ಎಮ್ ಎಸ್ ಎಸ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಬಿ ಎಸ್ ಸಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರಾದ ಶ್ರೀಯುತ ಬಸಯ್ಯ ಹಿರೇಮಠ, ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.