ಜಿಲ್ಲೆ

ಮಾನವ ಸರಪಳಿ ನಿಮಿರ್ಸಿದ್ದ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

Gadag - Shivanand Hiremath

ಗದಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆ, ಶಾಲಾ ಮಕ್ಕಳು ಮಾನವ ಸರಪಳಿ ನಿರ್ಮಿಸಿದ ಸಂದರ್ಭದಲ್ಲಿ ಹೆಜ್ಜೇನು ದಾಳಿ ಮಾಡಿದ್ದರಿಂದ ಇಬ್ಬರು ಶಿಕ್ಷಕಿಯರನ್ನು ಒಳಗೊಂಡಂತೆ ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸುರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಹೆಜ್ಜೇನು ದಾಳಿ ಮಾಡುತ್ತಿದ್ದಂತೆ ಶಾಲಾ ಮಕ್ಕಳು, ದಿಕ್ಕಾಪಾಲಾಗಿ ಓಡಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಾಲಾ ಶಿಕ್ಷಕಿ ಸರಸ್ವತಿ ಗುಡಿಸಾಗರ ಮತ್ತು ಸರೋಜ ದಿಂಡೂರು ಶಿಕ್ಷಕಿಯರಿಗೆ ಹೆಚ್ಚಿನ ಗಾಯಗಳಾಗಿವೆ. ಸ್ವತಃ ವೈದ್ಯರಾದ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಶಿಕ್ಷಕಿಯರನ್ನು ಕರೆತಂದು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.