Gadag: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ. ವಿ.ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ರಾಜ್ಯದಲ್ಲಿ ಡೆಂಗು ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಇದನ್ನು ಅರಿತುಕೊಂಡ ವಾಣಿಜ್ಯ ಮಹಾವಿದ್ಯಾಲಯದ ಎನ್ ಎಸ್ ಎಸ್ ಸ್ವಯಂಸೇವಕರು ಡೆಂಗು ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತೆ ವಹಿಸಲು ಮನೆಮನೆಗೆ ತೆರಳಿ ಜಾಗೃತಿ ಮೂಡಿಸುವ ವಿನೂತನ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಕಾರಣ ಕರ್ನಾಟಕದಲ್ಲಿ 7006 ಹೆಚ್ಚು ಜನರಿಗೆ ವೈರಲ್ ಸೋಂಕು ಇರುವುದು ಪತ್ತೆಯಾಗಿದೆ ಹಾಗೆ ಡೆಂಗು ಪ್ರಕರಣಗಳು ರಾಜ್ಯದಲ್ಲಿ ತಾಂಡವ ಆಡುತ್ತಿದ್ದು ಮಾರಕ ಜ್ವರಕ್ಕೆ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ ಹೀಗಾಗಿ ಪ್ರತಿ ಮನೆ ಮನೆಗೆ ತೆರಳಿ ತಿಳುವಳಿಕೆ ನೀಡುವ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಾಹುಬಲಿ ಪಿ ಜೈನರ ರವರು ಮಾತನಾಡಿ ಪ್ರತಿಯೊಬ್ಬ ಸ್ವಯಂಸೇವಕರು ಮೊದಲು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಲು ತಿಳಿಸಿ ಕಾರಣ ಡೆಂಗೀ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ಎಂಬ ಧೈಯವಾಕ್ಯವನ್ನು ಪಾಲಿಸಬೇಕು.
ಡೆಂಗೀ, ಚಿಕನ್‌ಗುನ್ಯಾ ಜ್ವರವು ವೈರಸ್‌ನಿಂದ ಉಂಟಾಗುತ್ತದೆ ಹಾಗೂ ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಗೀ,ಚಿಕನ್‌ಗುನ್ಯಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ ಎಚ್ಚರಿಕೆ ವಹಿಸಬೇಕು. ಈ ಜ್ವರಗಳನ್ನು ರಕ್ತ ಪರೀಕ್ಷೆಯಿಂದ ಮಾತ್ರ ಪತ್ತೆ ಹಚ್ಚಲಾಗುತ್ತದೆ. ಈಡೀಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತವೆ ಆದ್ದರಿಂದ ನಿಮ್ಮ ಮನೆಯಲ್ಲಿನ ತೊಟ್ಟಿ, ಬ್ಯಾರಲ್, ಡ್ರಮ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಚಗೊಳಿಸಿ ಪುನಃ ನೀರು ತುಂಬಿಸಬೇಕು ಮತ್ತು ಎಲ್ಲಾ ನೀರಿನ ಶೇಖರಣೆಗಳನ್ನು ಮುಚ್ಚಿಡಬೇಕು. ಮನೆ ಸುತ್ತ – ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ, ಘನ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಪರಿಸರವನ್ನು ಸ್ವಚ್ಚವಾಗಿಡಬೇಕು. ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಬಳಸಬೇಕು. ಡೆಂಗೀ,ಚಿಕುಂಗುನ್ಯ ರೋಗಿಗಳೂ ಸಹ ತಪ್ಪದೇ ಸೊಳ್ಳೆಯ ಪರದೆಯನ್ನು ಉಪಯೋಗಿಸಬೇಕು ಹಾಗೂ ಸೊಳ್ಳೆಗಳು ಕಚ್ಚದಂತೆ ಮೈ ತುಂಬಾ ಬಟ್ಟೆ ಧರಿಸಿ, ಸೊಳ್ಳೆ ಪರದೆ, ಸೊಳ್ಳೆ ಬತ್ತಿ, ಮುಲಾಮು, ದ್ರಾವಣ ಇವುಗಳನ್ನು ಉಪಯೋಗಿಸಬೇಕು.
ತಮ್ಮ ಮನೆಯ ಸದಸ್ಯರಿಗೆ ಅಥವಾ ಅಕ್ಕಪಕ್ಕದ ಸಾರ್ವಜನಿಕರಿಗೆ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.
ಚಿಕಿತ್ಸೆಯು ಎಲ್ಲಾ ಆಸ್ಪತ್ರೆಗಳಲ್ಲೂ ಉಚಿತವಾಗಿ ಲಭ್ಯವಿರುತ್ತದೆ. ಈಡಿಸ್ ಲಾರ್ವಾ ಸಮೀಕ್ಷೆಗಾಗಿ ನಿಮ್ಮ ಗ್ರಾಮಗಳಿಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಸ್ವಯಂ ಸೇವಕರಿಗೆ ಸಹಕಾರ ನೀಡಿ, ಸಲಹೆಗಳನ್ನು ಪಾಲಿಸಿ ಎಂದು ತಮ್ಮ ಮಾತುಗಳಲ್ಲಿ ಸ್ವಯಂಸೇವಕ ಸೇವಕಿಯರನ್ನು ಉದ್ದೇಶಿಸಿ ಜಾಗೃತಿ ಮೂಡಿಸುವ ವಿಚಾರಗಳನ್ನು ಹಂಚಿಕೊಂಡರು. ಈ ಒಂದು ಅಭಿಯಾನದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿ ಪ್ರತಿನಿಧಿಗಳಾದ ಮನೋಜ್ ದಲಬಂಜನ್, ಶಿವಯೋಗಿ ಗಡ್ಡದಮಠ ಆದರ್ಶ ಅಕ್ಕಿ ಗಿರಿ ಮಲ್ಲಿಕಾ ಮಹಾಂತ ಎನ್ ಎಸ್ ಎಸ್ ವಿಭಾಗದ ಸ್ವಯಂಸೇವಕ ಸೇವಕಿಯರು ಉಪಸ್ಥಿತರಿದ್ದರು