ಗದಗ: ಹಣಕಾಸು ಖಾತೆ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಒಲೈಸಲು ಒತ್ತು ನೀಡಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ ಆರೋಪಿಸಿದರು.
ರಾಜ್ಯ ಸರ್ಕಾರದ ಬಜೆಟ್ ಮಂಡನೆ ವಿರೋಧಿಸಿ ಶನಿವಾರ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಟಕದಿಂಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜನತೆಯ ನಿರೀೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗು ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ ಜನರ ಮೂಗಿಗೆ ತುಪ್ಪ ಸವರಲು ಕಾಂಗ್ರೆಸ್ ಹೊರಟಿದೆ. ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ ಎಂದು ಆಕ್ಷೇಪಿಸಿದ್ದಾರೆ.
ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀೆಗಳನ್ನು ಸಂರ್ಪೂಣವಾಗಿ ಹುಸಿಗೊಳಿಸಿದೆ. ದಿನೇ ದಿನೇ ಗ್ರಾಮೀಣ ಪ್ರದೇಶಗಳಿಂದ ಗುಳೇ ಹೋಗುವ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯುವ ಯಾವುದೇ ಕಾರ್ಯಕ್ರಮವನ್ನು ಪ್ರಕಟಿಸಿಲ್ಲ. ಹಾಗಾಗಿ ಇದು ಗ್ರಾಮೀಣ ಹಾಗು ರೈತ ವಿರೋಧಿ ಬಜೆಟ್ ಆಗಿದೆ. ಸರ್ಕಾರಿ ಶಾಲೆಗಳ ಕಟ್ಟಡಗಳ ವಿಸ್ತರಣೆ ಹಾಗು ನವೀಕರಣಕ್ಕೆ ಬಜೆಟ್ನಲ್ಲಿ ಯಾವುದೇ ಹಣ ನೀಡದೇ, ಕೇವಲ 5,000 ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ೂಷಿಸಿದ್ದಾರೆ. ಗುಣಮಟ್ಟದ ಶಿಣ ಹಾಗು ಮೂಲಸೌಕರ್ಯದತ್ತ ದೃಷ್ಟಿಹರಿಸದೆ ಕೈ ತೊಳೆದುಕೊಳ್ಳಲಾಗಿದೆ ಎಂದರು.
ವಿಜಯಕುಮಾರ ಗಡ್ಡಿ ಮಾತನಾಡಿ, ಸಾಂಸತಿಕ ವಲಯ ಹಾಗು ಪ್ರವಾಸೊದ್ಯಮವನ್ನು ಬಹುವಾಗಿ ವಿಸ್ತರಿಸುವ ನಿದಿರ್ಷ್ಟವಾದ ಯೋಜನೆಗಳನ್ನು ಬಜೆಟ್ನಲ್ಲಿ ಪ್ರಕಟಿಸದೇ ಈ ೇತ್ರಗಳ ಬೆಳವಣೆಗೆ ಪ್ರೋತ್ಸಾಹ ನೀಡುವ ಪೊಳ್ಳು ಭರವಸೆ ನೀಡಲಾಗಿದೆ. ಪರಿಶಿಷ್ಟ, ಹಿಂದುಳಿದ ಹಾಗೂ ಅತಿ ಹಿಂದುಳಿದ ಸಮುದಾಯದವರ ಜಪ ಮಾಡಿ ರಾಜಕೀಯವಾಗಿ ಬೆಳೆದು ಬಂದ ಸಿದ್ದರಾಮಯ್ಯನವರು ಈ ಸಮುದಾಯಗಳ ಏಳಿಗೆಗೆ ಯಾವ ಯೋಜನೆಗಳನ್ನು ಪ್ರಕಟಿಸಿಲ್ಲ. ವಿವಿಧ ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದಿನ ಬಜೆಟ್ನಲ್ಲಿ ೂಷಣೆಯಾದ ರ್ಪೂಣ ಪ್ರಮಾಣದ ಅನುದಾನ ಬಿಡುಗಡೆ ಮಾಡಿಲ್ಲ ಒಬಿಸಿ ಸಮುದಾಯಗಳ ಹಿತಾಸಕ್ತಿಯನ್ನು ರ್ಪೂಣ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕೋಶಾಧ್ಯಕ್ಷ ನಾಗರಾಜ ಕುಲಕಣಿರ್ ಮಾತನಾಡಿ, ಶಿಣ ತರಬೇತಿ ಪಡೆದು ಉದ್ಯೋಗಕ್ಕಾಗಿ ಕಾದು ಕುಳಿತಿರುವ ಶಿಕ ಸಮುದಾಯವನ್ನು ಸಂರ್ಪೂಣ ನಿರಾಸೆಗೊಳಿಸುವ ಮೂಲಕ ಶಿಣ ೇತ್ರವನ್ನು ಗಟ್ಟಿಗೊಳಿಸುವಲ್ಲಿ ತನ್ನ ನಿರಾಸಕ್ತಿಯನ್ನು ಮುಖ್ಯಮಂತ್ರಿ ಬಜೆಟ್ ಮೂಲಕ ತೋರಿಸಿದ್ದಾರೆ. ಕೆಳ ಮದ್ಯಮ ವರ್ಗಗಳ ಅಭ್ಯುದಯ ಕೇಂದ್ರೀಕರಿಸುವ ಯಾವ ಯೋಜನೆಯೂ ಇಲ್ಲ. ವಸತಿ ಸಮಸ್ಯೆ ನೀಗಿಸಲು ಈ ಬಜೆಟ್ ನಲ್ಲಿ ಯಾವುದೇ ಯೋಜನೆ ಪ್ರಕಟಿಸಿಲ್ಲದಿರುವುದು ಈ ಸರ್ಕಾರ ಕೇವಲ ಬಡವರ ವಿರೋಧಿ ಅಷ್ಟೇ ಅಲ್ಲ, ಮಧ್ಯಮ ಹಾಗೂ ಕೆಳವರ್ಗಗಳ ವಿರೋಧಿ ಎನ್ನುವುದನ್ನು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತೋರಿಸಿದ್ದಾರೆ ಎಂದು ಆರೋಪಿಸಿದರು.
ಜಗನ್ನಾಥಸಾ ಭಾಂಡಗೆ, ರಾವೇಂದ್ರ ಯಳವತ್ತಿ, ಚಂದ್ರು ತಡಸದ, ಲಿಂಗರಾಜ ಪಾಟೀಲ, ಅನೀಲ ಅಬ್ಬಿಗೇರಿ, ಶಿವು ಹಿರೇಮನಿಪಾಟೀಲ, ನಾಗರಾಜ ತಳವಾರ, ನವೀನ ಕೊಟೆಕಲ್, ಮಹಾದೇವಪ್ಪ ಹಡಪದ, ಉಷಾ ದಾಸರ, ವಿಜಯಲಕ್ಷಿ$್ಮ ದಿಂಡೂರು ಇದ್ದರು.
======
ಕೋಟ್:
ಬಜೆಟ್ ನಲ್ಲಿ ೂಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. ಹೇಳುವದು ಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್ ಆಗಬಾರದು. ಕಳೆದ ಬಜೆಟ್ ನಲ್ಲಿ ೂಷಣೆಯಾಗಿದ್ದವೆಲ್ಲವೂ ೂಷಣೆಯಾಗಿಯೇ ಉಳಿದಿದೆ. ಈ ಬಜೆಟ್ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು. ರಾಜ್ಯದ ದಯನೀಯ ಆಥಿರ್ಕ ಪರಿಸ್ಥಿತಿ ಇದೆ ಎಂಬುದು ಸಾಬೀತಾಗಿದೆ.
ರಾವೇಂದ್ರ ಯಳವತ್ತಿ. ನಗರಸಭೆ ಸದಸ್ಯ
ಕೋಟ್:
ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆಥಿರ್ಕ ಸ್ಥಿತಿಯ ನಿರ್ವಹಣೆಯ ವೈಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ. ಕೃಷಿಕರು, ಕಾಮಿರ್ಕರು, ಆಶಾ ಹಾಗು ಅಂಗನವಾಡಿ ಕಾರ್ಯಕರ್ತೆಯರು, ಎನ್ಎಚ್ಎಂ ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ೂಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ನಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಉಲ್ಲೇಖವಿಲ್ಲ.
ವಿಜಯಕುಮಾರ ಗಡ್ಡಿ, ಬಿಜೆಪಿ ಮುಖಂಡ
ಕೋಟ್:
ತಾವು ೂಷಿಸಿರುವ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆಥಿರ್ಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಡಿಕರಣದ ಮೂಲಗಳನ್ನು ಸ್ಪಷ್ಟವಾಗಿ ಬಜೆಟ್ ನಲ್ಲಿ ವಿವರಿಸಿಲ್ಲ. ಆ ಮೂಲಕ ಇದೊಂದು ತೋರಿಕೆಯ ಹಾಗೂ ಜನರ ಕಿವಿಗೆ ಹೂ ಮುಡಿಸುವ ಬಜೆಟ್ ಆಗಿದೆ.
ಲಿಂಗರಾಜ ಪಾಟೀಲ, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದಶಿರ್
====