ವಿಜಯವಾಣಿ ಸುದ್ದಿಜಾಲ ಗದಗ
ಗದಗ- ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಕಂಡರು, ಕಾರ್ಯಕರ್ತರು ಹಾಗೂ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಮಹಾತ್ಮ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಖಾಲಿ ಕೊಡ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ನಗರಸಭೆ ಆವರಣದೊಳಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಬಿಜೆಪಿ ಪ್ರತಿಭಟನಾಕಾರ ನಡುವೆ ಮಾತಿನ ಚಕಮಕಿ ವಾಗ್ವಾದ ಜರುಗಿತು. ಬಿಜೆಪಿ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಪೊಲೀಸರು ತಡೆದರು. ನಂತರ ನಗರಸಭೆ ಕಚೇರಿ ಗೇಟ್ ಮುಂದೆ ಕುಳಿತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದರು.
ಗದಗ ನಗರದ ಹಲವು ವಾರ್ಡಗಳಲ್ಲಿ ಕಳೆದ 20 ದಿನಗಳಿಂದ ಕುಡಿಯುವ ನೀರು ಪೂರೈಕೆ ಆಗಿಲ್ಲ. ನಿರಂತರ ಕುಡಿಯುವ ನಿರುನ ಯೋಜನೆ ವಿಲವಾಗಿದೆ. ಕಳಪೆ ಕಾಮಗಾರಿಗಳಿಂದ ಮುಂಡರಗಿಯಿಂದ ಗದಗ ನಗರಕ್ಕೆ ನೀರು ಪೂರೈಕೆ ಆಗುತ್ತಿಲ್ಲ. ನಿರಂತರ ಕುಡಿಯುವ ನೀರಿನ ಯೋಜನೆ ವಿಲವಾಗಲು ಕಾನೂನು ಸಚಿವ ಎಚ್.ಕೆ. ಪಾಟೀಲರೇ ಕಾರಣ ಎಂದು ಆರೋಪಿಸಿದರು.
ಪ್ರತಿಭಟನೆ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಆಗಮಿಸಿ ಪ್ರತಿಭಟನಾಕಾರ ಜತೆ ಸಂಧಾನ ಸಣೆ ನಡೆಸಲು ಯತ್ನಿಸಿದರು. ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು. ಈ ವೇಳೆ ಪ್ರತಿಭಟನಾಕಾರ ಆಕ್ರೊಶಭರಿತರಾದರು. ಕಳೆದ 50 ವರ್ಷಗಳಿಂದ ನೀರಿನ ಸಮಸ್ಯೆ ಇದ್ದೇ ಇದೆ. 100 ಕೋಟಿಗೂ ಅಧಿಕ ಹಣ ವ್ಯಯಿಸಿ ನಿರಂತರ ಕುಡಿಯುವ ನೀರಿನ ಯೋಜನೆ ಜಾರಿ ತಂದರೂ ಸಹ ಗದಗ ನಗರಕ್ಕೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಗದಗ- ಬೆಟಗೇರಿ ಅವಳಿ ನಗರದಲ್ಲಿ ನೀರಿನ ಸಮಸ್ಯೆ ಮುಂದುವರಿದಿದ್ದು, ನಗರಸಭೆ ಸದಸ್ಯರು ವಾಡಿರ್ನ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಂದೆ ಆಗಿದೆ. ಇದಕ್ಕೆ ಪರಿಹಾರವೇ ಇಲ್ಲದಂತಾಗಿದೆ ಎಂದು ಅಳಲು ತೋಡಿಕೊಂಡರು.
ಜಿಲ್ಲಾಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದ ನಗರಸಭೆ ಬಿಜೆಪಿ ಸದಸ್ಯರು ಹಾಗೂ ಮುಖಂಡರು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಭೆ ನಡೆಸಿ ಚಚಿರ್ಸೋಣ, ಐದು ಜನ ಮುಖಂಡರು ಸಭೆಗೆ ಬನ್ನಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ತಿಳಿಸಿದರು. ಬಿಜೆಪಿ ಮುಖಂಡರು ಎಲ್ಲ ಸದಸ್ಯರನ್ನು ಸಭೆ ಕರೆಯಿರಿ ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ನಂತರ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಅನಿಲ ಅಬ್ಬಿಗೇರಿ, ಶ್ವೇತಾ ದಂಡಿನ, ವಿದ್ಯಾವತಿ ಗಡಗಿ, ಲಕ್ಷಿ$್ಮ ಕಾಕಿ, ಉಷಾ ದಾಸರ, ವಿನಾಯಕ ಮಾನ್ವಿ, ನಾಗರಾಜ ತಳವಾರ, ಎಂ. ಎಂ. ಹಿರೇಮಠ, ಶ್ರೀಪತಿ ಉಡುಪಿ, ರಾವೇಂದ್ರ ಯಳವತ್ತಿ, ಚಂದ್ರು ತಡಸದ ಮಹೇಶ ದಾಸರ, ನಗರಸಭೆ ಸದಸ್ಯರು, ಕಾರ್ಯಕರ್ತರು ಸೇರಿ ಮುಖಂಡರು ಭಾಗವಹಿಸಿದ್ದರು.