ಜಿಲ್ಲೆ

ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ: ರಾಜು ಕುರುಡಗಿ

Gadag - Shivanand Hiremath

ಗದಗ: ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬಹುದೆಂಬ ಅಧಿಕಾರವನ್ನು ರದ್ದು ಮಾಡುವ ಸಂಪುಟದ ನಿರ್ಣಯದ ಮೂಲಕ ಕಾಂಗ್ರೆಸ್​ ಸರ್ಕಾರ ಸಂವಿಧಾನ ವಿರೋಧಿ-ಯಾಗಿ ವತಿರ್ಸಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣ ಸೇರಿ ಹಗರಣಗಳಿಂದಲೇ ಕೂಡಿದ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯನವರು ದೇಶದ ಒಕ್ಕೂಟ ವ್ಯವಸ್ಥೆಗೆ ಭಂಗ ತರುತ್ತಿದ್ದಾರೆ. ಕಾಂಗ್ರೆಸ್ಸಿನ ಇತರ ಹಗರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಸಿಬಿಐ ಸಂಸ್ಥೆಯನ್ನು ಬ್ಲಾಕ್​ ಮಾಡುತ್ತಿರುವ ಹಾಗೆ ಕಾಂಗ್ರೆಸ್​ ವತಿರ್ಸುತ್ತಿದೆ, ಕಾಂಗ್ರೆಸ್​ ಸರ್ಕಾರದ ನಿರ್ಧಾರ ಸಂರ್ಷಕ್ಕೆ ಎಡೆ ಮಾಡಿಕೊಡುವಂತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಸಿದ್ದರಾಮಯ್ಯನವರು ವಿಪ ನಾಯಕರಾಗಿ ರಾಜೀನಾಮೆ ಕೇಳಿದ್ದರು. ಎಲ್ಲರಿಗೂ ಒಂದೇ ಕಾನೂನು ಎಂಬುದು ಸಿದ್ದರಾಮಯ್ಯ ಅವರು ತಿಳಿದಿದ್ದು ಈ ರೀತಿ ವತಿರ್ಸುತ್ತಿರುವುದು ಪ್ರಜಾಪ್ರಭುತ್ವದ ಧಕ್ಕೆ ಎಂದು ತಿಳಿಸಿದ್ದಾರೆ.