AA 
ಜಿಲ್ಲೆ

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Gadag - Shivanand Hiremath

ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಡಿ.ದೇವರಾಜ ಅರಸು 109ನೇ ಜನ್ಮದಿನಾಚರಣೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಜರುಗಿತು. 

ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು ಅವರು ಡಿ.ದೇವರಾಜ ಅರಸು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಸಮರ್ಪಿಸಿ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ನದಿನಾಚರಣೆ ಅಂಗವಾಗಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕ್ಕಮ್ಮನವರು ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ವಿಧಿ ಭೋದಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿರವಿ ಗುಂಜೀಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಪೋತದಾರ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ಗಣ್ಯರು ಹಾಜರಿದ್ದರು.