ಜಿಲ್ಲೆ

ಜಿಲ್ಲಾಡಳಿತ ಭವನದಲ್ಲಿ ಹುತಾತ್ಮ ದಿನಾಚರಣೆ

Gadag - Shivanand Hiremath

ಗದಗ: ಹುತಾತ್ಮಕ ದಿನಾಚರಣೆ ಅಂಗವಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿ ರವಿವಾರದಂದು ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ,ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ,ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಭರತ್ ಎಸ್ ,ಪೊಲೀಸ್ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ,ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ,  ಎ.ಸಿ ಗಂಗಪ್ಪ ಗಣ್ಯರಾದ ವಾಸಣ್ಣ ಕುರಡಗಿ,ಬಿ.ಬಿ.ಅಸೂಟಿ,ಅಶೋಕ ಮಂದಾಲಿ,ಬಸವರಾಜ ಕಡೇಮನಿ, ಹಾಜರಿದ್ದರು.