ಜಿಲ್ಲೆ

ವಿದ್ಯಾಥಿರ್ಗಳು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು: ಡಿಡಿಪಿಐ ಬುರಡಿ

Gadag - Shivanand Hiremath

ವಿಜಯವಾಣಿ ಸುದ್ದಿಜಾಲ ಗದಗ

ಸರ್ಕಾರಿ ಶಾಲೆಯ ವಿದ್ಯಾಥಿರ್ಗಳಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುವ ಮೂಲಕ ವಿದ್ಯಾಥಿರ್ಗಳ ಶ್ರೇಯೋಭಿವೃದ್ಧಿ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಿದೆ. ವಿದ್ಯಾಥಿರ್ಗಳು ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಆರ್​. ಎಸ್​. ಬುರಡಿ ಹೇಳಿದರು.

ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸೆಸೆಲ್ಸಿಯಲ್ಲಿ ಮೊದಲ 5 ಸ್ಥಾನ ಪಡೆದುಕೊಂಡ ತಾಲೂಕಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾಥಿರ್ಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾಥಿರ್ಗಳು ಸಮಯ ವ್ಯರ್ಥ ಮಾಡುವದು, ದುಶ್ಚಟಗಳನ್ನು ರೂಢೀಸಿಕೊಳ್ಳುವದು ಆಗಬಾರದು. ಟಿವಿ ಮತ್ತು ಮೊಬೈಲ್​ಗಳನ್ನು ಅಗತ್ಯವಿದ್ದರೆ ಮಾತ್ರ ಬಳಕೆ ಮಾಡಬೇಕು. ಜ್ಞಾನಾರ್ಜನೆಗೆ ಸಂಪರ್ಕಕ್ಕೆ ಅಗತ್ಯಕ್ಕೆ ತಕ್ಕಂತೆ ಉಪಯೋಗಿಸಬೇಕು ಎಂದರು.

ಶಾಲೆಯ ಪ್ರತಿಭಾನ್ವಿತ ವಿದ್ಯಾಥಿರ್ಗಳಾದ ಸ್ಪೂತಿರ್ ಉಡಚಗೊಂಡ, ಲಕ್ಷಿ$್ಮ ನಲುಡಿ, ಕೀತಿರ್ ನಾಯ್ಕರ್​, ಶಾಕಾಂಬರಿ ನರೇಗಲ್ಲ, ಜ್ಯೋತಿ ಹೇಮಾದ್ರಿ ಅವರಿಗೆ ಪ್ರತಿಭಾ ಪುರಸ್ಕಾರದ ಚೆಕ್ಕು, ಪ್ರಮಾಣ ಪತ್ರ, ಕಾಲೇಜ್​ ಬ್ಯಾಗ್​ಗಳನ್ನು ನೀಡಿ ಶಾಲೆಯ ಎಲ್ಲ ಮಕ್ಕಳಿಗೆ ಸಿಹಿ ವಿತರಿಸಿ ಶುಭ ಕೋರಲಾಯಿತು.

ಇದೇ ಸಂದರ್ಭದಲ್ಲಿ ನಗರದ ಹಳೇ ಬಸ್​ ನಿಲ್ದಾಣದ ಬಳಿ ಇರುವ ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾಥಿರ್ಗಳಿಗೆ ಪ್ರತಿಭಾ ಪುರಸ್ಕಾರದ ಚೆಕ್ಕು, ಪ್ರಮಾಣ ಪತ್ರ, ಕಾಲೇಜ್​ ಬ್ಯಾಗ್​ಗಳನ್ನು ನೀಡಿ ಗೌರವಿಸಲಾಯಿತು.

ಪ್ರತಿಷ್ಠಾನದ ಅಧ್ಯ ಶಿವಕುಮಾರ ಎಚ್​.ಪಾಟೀಲ ಅವರು ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳನ್ನು ವಿವರಿಸಿದರು. ಜೆ.ಬಿ.ಅಣ್ಣಿಗೇರಿ, ಪ್ರತಿಷ್ಠಾನದ ಕಾರ್ಯದಶಿರ್ ಸುಭಾಸಚಂದ್ರ ಬೆಟದೂರ, ಖಜಾಂಚಿ ವಿಜಯಲಕ್ಷಿ$್ಮ ಅಂಗಡಿ, ನಿರ್ದೆಶಕ ಡಾ.ಶರಣಬಸವ ಚೌಕಿಮಠ, ಡಾ.ಬಸಯ್ಯ ಬೆಳ್ಳೇರಿಮಠ, ಶಿವಪ್ಪ ಕತ್ತಿ, ಆಂಜನೇಯ ಕಟಗಿ, ಸಿದ್ಧಲಿಂಗನಗೌಡ ಪಾಟೀಲ, ಡಾ.ಬಸವರಾಜ ಚನ್ನಪ್ಪಗೌಡ್ರ, ಭಾರತಿ ಪಾಟೀಲ, ನೇಹಾ, ಸುಧಾರಾಣಿ, ಪ್ರಸನ್​ಕುಮಾರ ಗುತ್ತಿ ಸೇರಿದಂತೆ ಇತರರಿದ್ದರು.