ಜಿಲ್ಲೆ

ದೇವರ ದಾಸಿಮಯ್ಯನವರ ಜಯಂತಿ-2025

Gadag - Shivanand Hiremath

ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗದಗ -ಬೆಟಗೇರಿಯ ಟರ್ನಲ್ ಪೇಟೆ ಶ್ರೀ ದೇವರ ದಾಸಿಮಯ್ಯ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆದ್ಯ ವಚನಕಾರ ನೇಕಾರ ಸಂತ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಜಿಲ್ಲಾಧಿಕಾರಿ  ಸಿ ಎನ್ ಶ್ರೀದರ್ ಅವರು ಉದ್ಘಾಟಿಸಿದರು.

ಜಿಲ್ಲಾಧಿಕಾರಿಯವರು ಮಾತನಾಡುತ್ತಾ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊAಕುಗಳನ್ನು ತಿದ್ದಿ ಲೋಕಕಲ್ಯಾಣಕ್ಕಾಗಿ ಶ್ರಮಿಸಿದವರು. ಮನುಷ್ಯನ ಅಗತ್ಯತೆಗಳನ್ನು ಪೂರೈಸುವವರು ರೈತರು ಮತ್ತು ನೇಕಾರರಾಗಿದ್ದಾರೆ. ದೇವರ ದಾಸೀಮಯ್ಯನವರು ತಮ್ಮ ನೇಕಾರಿಕೆ ವೃತ್ತಿಯೊಂದಿಗೆ ವಚನಗಳನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ದೇವರ ದಾಸೀಮಯ್ಯನವರ ವಚನಗಳ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಗದಗ ಬೆಟಗೇರಿ ಗುರುಸೇವಕರಾದ ರಾಘವೇಂದ್ರ ಕೊಪ್ಪಳ ಅವರು ದೇವರ ದಾಸಿಮಯ್ಯ ಅವರು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು. ಮುದನೂರು ಹಲವಾರು ದೇವಾಲಯಗಳಿಂದ ಕೂಡಿದ್ದು ಅಲ್ಲಿನ ರಾಮನಾಥ ದೇವಸ್ಥಾನ ದೇವಲ ಮಹರ್ಷಿಯರ ಅಚ್ಚುಮೆಚ್ಚು. ದೇವರ ದಾಸೀಮಯ್ಯನವರು ರಾಮನಾಥ ಸ್ವಾಮಿಯ ಆರಾಧಕರಾಗಿದ್ದು ಇವರ ಅಂಕಿತನಾಮ ರಾಮನಾಥ ಎಂದು ಆಗಿತ್ತು ಎಂದು ತಿಳಿಸಿದೇವರ ದಾಸಿಮಯ್ಯನವರ ಜೀವನ ಮತ್ತು ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖ್ಯಸ್ಥರು, ಗಣ್ಯರು, ಹಿರಿಯರು ಹಾಜರಿದ್ದರು.
ವೆಂಕಟೇಶ ಅಲ್ಕೋಡ ನಾಡಗೀತೆ ಪ್ರಸ್ತುತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಸರ್ವರಿಗೂ ಸ್ವಾಗತಿಸಿದರು.