ಜಿಲ್ಲೆ

ಡಿ.ದೇವರಾಜ ಅರಸುರವರ 110ನೇ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಸೂಚನೆ

Gadag - Shivanand Hiremath
ವಿಜಯವಾಣಿ ಸುದ್ದಿಜಾಲ ಗದಗ
ಮಾಜಿ ಸಿಎಂ ಡಿ.ದೇವರಾಜ ಅರಸು ರವರ 110 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ  ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾಜಿ ಮುಖ್ಯಂಮತ್ರಿ ಡಿ.ದೇವರಾಜ ಅರಸು ರವರ 110 ನೇ ಜನ್ಮ ದಿನಾಚರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಪ್ರಯಕ್ತ ಅವರ ಜೀವನ ಸಾಧನೆಗಳ ಕುರಿತು ವಿಧ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪ್ರಬಂಧ, ಭಾಷಣ ಸ್ಪರ್ಧೆ ಆಯೋಜನೆ ಮಾಡಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸಬೇಕು. ಕಾರ್ಯಕ್ರಮದ ದಿನದಂದು ರಾಣಿ ಚನ್ನಮ್ಮ ವೃತ್ತದ ದಿಂದ ಕನಕ ಭವನದ ವರೆಗೆ ಭವ್ಯ ಮೆರವಣಿಗೆ ಆಯೋಜಿಸಲು ಸರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ ಎಂ ತುಂಬರಮಟ್ಟಿ ಮಾತನಾಡಿ, ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವದು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಬಸವರಾಜ ಬಳ್ಳಾರಿ ಮಾತನಾಡಿ ಜಿಲ್ಲೆಯಲ್ಲಿ ಇರುವಂತಹ ವಸತಿ ನಿಲಯಗಳಲ್ಲಿ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ರಸಪ್ರಶ್ನೆ, ರಂಗೋಲಿ ಸ್ಪರ್ಧೆ, ಮತ್ತು ಇಂಡೋರ್ ಗೇಮ್ಸ್ ನಡೆಸಿಕೊಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಓ  ಭರತ್.ಎಸ್., ಪಕೀರಪ್ಪ ಹೆಬಸೂರು,  ಆರ್. ಡಿ. ಕಡ್ಲಿಕೊಪ್ಪ, ಎಸ್. ಮಲ್ಲಿಕಾರ್ಜುನ, ರುದ್ರಣ್ಣ ಗುಳಗುಳಿ, ಹರೀಶ್ ಪೂಜಾರ್, ಮೋಹನ್ ಚಂದಪ್ಪನವರ್, ಶಿವಪ್ಪ ಮಡಿವಾಳ, ಧಾಮಣ್ಣ ಮಡಿವಾಳರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.