ಜಿಲ್ಲೆ

ವಿವಿಧ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಗಳು ಮುಂದೂಡಿಕೆ

Gadag - Shivanand Hiremath

ಗದಗ: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆಯನ್ವಯ ಉಳಿಕೆ ಮೂಲವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಹಾಗೂ 15 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು.

ಈ ಮಧ್ಯೆ ದಿನಾಂಕ 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ " ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬAಧಿಸಿದAತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ " ಎಂದು ತಿಳಿಸಲಾಗಿರುತ್ತದೆ.

ಮೇಲ್ಕಂಡಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ. ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.