ಜಿಲ್ಲೆ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ಖಂಡಿಸಿ ಆ. 5ರಂದು ಪ್ರತಿಭಟನೆ: ಹೆಬಸೂರು

Gadag - Shivanand Hiremath

ವಿಜಯವಾಣಿ ಸುದ್ದಿಜಾಲ ಗದಗ
ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್​ ನಾಯಕರು ವಿರುದ್ಧ ಕರ್ನಾಟಕ ಪ್ರದೇಶದ ಕುರುಬರ ಸಂದ ಜಿಲ್ಲಾ ಟಕದ ವತಿಯಿಂದ ಆ.5ರಂದು ನಗರದ ಟಿಪ್ಪು ಸುಲ್ತಾನ ಸರ್ಕಲ್​ ನಿಂದ ಜಿಲ್ಲಾಡಳಿತ ಕಚೇರಿ ವರೆಗೆ ಮೌನ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಗವುದು ಹೆಬಸೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 45 ವರ್ಷಗಳಿಂದ ಕಪ್ಪುಚುಕ್ಕಿ ಇಲ್ಲದೆ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದಾರಾಮಯ್ಯ ಅವರ ಸಾಧನೆಗಳನ್ನು ಸಹಿಸದೆ ಬಿಜೆಪಿ ಹಾಗೂ ಜೆಡಿಎಸ್​ ನವರು ತೇಜೊವಧೆ ಮಾಡುತ್ತಿದ್ದಾರೆ. ಮುಡಾ ಹಗರಣ ಹಿಡಿದು ಪ್ರತಿಭಟಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಈ ಪ್ರಕರಣದಲ್ಲಿ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.
ಅ. 7ರಂದು ಬೆಂಗಳೂರಿನಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಂಡಿದ್ದು, ಆ ಸಭೆಗೆ ಎಲ್ಲರೂ ಭಾಗವಹಿಸುತ್ತೇವೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿಯವರು ಅಧಿಕಾರದ ಆಸೆಗಾಗಿ ಜನಪರ ಇರುವ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. 15ಬಾರಿ ಬಜೆಟ್​ ಮಂಡಿಸಿದ ಏಕೈಕ ಸಿಎಂ ಆಗಿದ್ದಾರೆ. ಅಹಿಂದ ವರ್ಗಗಳಿಂದ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕ್ಕಿರಪ್ಪ ಹೆಬಸೂರ ಎಚ್ಚರಿಕೆ ನೀಡಿದರು.
ಜಿಲ್ಲಾ ಕಾರ್ಯದಶಿರ್ ಶರಣಬಸಪ್ಪ ಮುದಿಯಣ್ಣನವರ, ನಾಗಪ್ಪ ಗುಗ್ಗರಿ, ಶೇಖಣ್ಣ ಕಾಳೆ, ಹೊನ್ನಪ್ಪ ಪೋಟಿ, ಚನ್ನಮ್ಮ ಹುಳಕಣ್ಣವರ, ರೇಖಾ ಜಡಿಯವರ, ನೀಲಪ್ಪ ಗುಡದಣ್ಣವರ, ಶರಣಪ್ಪ ಕುರಿ ಇತರರು ಇದ್ದರು.