ಗದಗ: ಗದಗನಲ್ಲಿ ೫೦ ಹಾಸಿಗೆಗಳ ತೀವ್ರ ನಿಗಾ ಘಟಕ ಗದಗ ಜಿಮ್ಸ್ ಆಸ್ಪತ್ರೆಗೆ ಸೇರ್ಪಡೆ ಆಗುವ ಮೂಲಕ ಈ ಭಾಗದ ಸಾರ್ವಜನಿಕರ ಬಹುದಿನಗಳ ನಿರೀಕ್ಷೆ ಸಾಕಾರವಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ರವಿವಾರ ೫೦ ಹಾಸಿಗೆಗಳ ತೀವ್ರ ನಿಗಾ ಘಟಕ (Critical Care Unit)ಮತ್ತು ಜಿಲ್ಲಾ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (District Integrated Public Health Laboratory) ಕಟ್ಟಡ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಹಾಗೂ ಅತ್ಯಾಧುನಿಕ ಅಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ನೂತನ ಡಯಾಲಿಸಿಸ್ ಘಟಕ ಉದ್ಘಾಟನೆ ನೆರವೇರಿಸಿ ಸಚಿವರು ಮಾತನಾಡಿದರು.
ತೀವ್ರನಿಗಾ ಘಟಕ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರುಗಳು ತುಂಬಾ ಸಹಕಾರ ನೀಡಿದ್ದು ಧನ್ಯವಾದಗಳು ಎಂದರು. ಈ ತೀವ್ರನಿಗ ಘಟಕ ಅಂದಾಜು 20 ಕೋಟಿ ರೂಗಳಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಮುಂದಿನ ಹದಿನೈದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಂಜಿನಿಯರ್ ಗಳಿಗೆ ಸೂಚಿಸಿದರು.
ಈ ತೀವ್ರನಿಗಾ ಘಟಕದಿಂದ ಈ ಭಾಗದ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕಿಡ್ನಿ ರೋಗಿಗಳಿಗೆ, ಹೃದಯ ಸಂಬಂಧಿ ರೋಗಿಗಳಿಗೆ, ಹಾವು ಕಡಿತ ಹಾಗೂ ರಸ್ತೆ ಅಪಘಾತ ಸಂದರ್ಭದಲ್ಲಿ ರೋಗಿಗಳ ಜೀವ ಸಂರಕ್ಷಣೆಗೆ ಅತ್ಯಂತ ಸಹಕಾರಿಯಾಗಲಿದೆ ಎಂದರು.
ಜಿಲ್ಲಾಸ್ಪತ್ರೆಯ ಸ್ವಚ್ಛತೆ ಕುರಿತು ಕಳೆದ ಆರು ತಿಂಗಳಿಂದ ಯಾವುದೇ ತರಹದ ಸಾರ್ವಜನಿಕರ ದೂರುಗಳು ಬಂದಿರುವುದಿಲ್ಲ ಇದಕ್ಕೆ ಇಲ್ಲಿನ ವಿದ್ಯಾರ್ಥಿಗಳ ಶ್ರಮದಾನ ಮೂಲಕ ಸ್ವಚ್ಛತೆಗೆ ಮುಂದಾಗಿರುವುದು ಕಾರಣವಾಗಿದೆ ಎಂದು ತಿಳಿದುಬಂದಿದ್ದು, ಸಂತಸದ ವಿಷಯ. ದವಾಖಾನೆಗಳು ಸ್ವಚ್ಛವಾಗಿದ್ದರೆ ಅವುಗಳನ್ನು ದೇವಸ್ಥಾನಗಳು ಎಂದು ಜನಸಾಮಾನ್ಯರು ಭಾವಿಸುವುದು ಆ ತರಹದ ಮನೋಭಾವನೆ ಸ್ವಚ್ಛತೆಯಿಂದ ಮಾತ್ರನೇ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಜೀನ್ಸ್ ಆಸ್ಪತ್ರೆಗೆ ಶೇಕಡ 90ರಷ್ಟು ದುರ್ಬಲರು ಬಡವರು ಚಿಕಿತ್ಸೆಗಾಗಿ ಆಗಮಿಸುವುದುಂಟು ಇಲ್ಲಿನ ವೈದ್ಯರು ಹಾಗೂ ಸಿಬ್ಬಂದಿಗಳು ಸೇವಾ ಮನೋಭಾವನೆ ಯೊಂದಿಗೆ ರೋಗಿಗಳ ಸೇವೆ ಮಾಡಬೇಕು ಇದರಿಂದ ಸೇವೆ ಮಾಡಿದವರಿಗೂ ಒಳಿತಾಗುತ್ತದೆ. ದೇಶದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ತುಂಬಾ ದುಬಾರಿ ಇದೆ. ಇದನ್ನು ಸರ್ಕಾರಿ ಆಸ್ಪತ್ರೆಗಳು ಉಚಿತವಾಗಿ ಚಿಕಿತ್ಸೆ ನೋಡುವ ಮೂಲಕ ಜನಸಾಮಾನ್ಯರಿಗೆ ನೆರವಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನುಡಿದರು.
ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ ಎಸ್ ಪಾಟೀಲ ಅವರು ಮಾತನಾಡಿ ಗದಗ ಜೀಮ್ಸ್ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವದ ಹಂಗು ತೊರೆದು ಉತ್ತಮವಾಗಿ ಕಾರ್ಯನಿರ್ವಹಿಸುತ್ತೀರಿ ನಿಮ್ಮ ಸೇವೆಯನ್ನು ಮರೆಯಲಾಗದು ಎಂದರು. ಜಿಮ್ಸ್ ಆಸ್ಪತ್ರೆ ಈ ಮಟ್ಟದ ಅಭಿವೃದ್ಧಿ ಹೊಂದಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ್ ಅವರ ಕಾಳಜಿ ಕಳಕಳಿ ಅಪಾರವಾಗಿದೆ ಎಂದರು.
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಅಸುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾಜುದ್ದೀನ. ಹ. ಓಲೇಕಾರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿಬಿ ಅಸೂಟಿ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ ಬಸವರಾಜ ಪಿ. ಬೊಮ್ಮನಹಳ್ಳಿ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಾಂಶುಪಾಲ ಡಾ. ರಾಜು ಜಿ ಎಮ್, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀಕ್ಷಕ ಡಾ. ರೇಖಾ ಎಸ್. ಸೋನಾವನೆ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ. ಬಿ. ಸಿ. ಕರೀಗೌಡರ, ಡಿ.ಎಚ್.ಓ ಡಾ.ಎಸ್.ಎಸ್. ನೀಲಗುಂದ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.