ಜಿಲ್ಲೆ

ಶಾಂತಿ ಸೌಹಾರ್ದತೆಯಿಂದ ದೇಶವನ್ನು ಪ್ರಗತಿ ಪಥದೆಡೆ ಮುನ್ನಡೆಸೋಣ: ಸಚಿವ ಎಚ್​. ಕೆ. ಪಾಟೀಲ

Gadag - Shivanand Hiremath

ವಿಜಯವಾಣಿ ಸುದ್ದಿಜಾಲ ಗದಗ
ಅನೇಕ ಸ್ವಾತಂತ್ರ್ಯ ಹೋರಾಟಗಾರರ, ದೇಶಭಕ್ತರುಗಳ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಮೂಲಕ ನಾವಿಂದು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವವನ್ನು ಎತ್ತಿ ಹಿಡಿಯುವ ಮೂಲಕ ದೇಶವನ್ನು ಅಭಿವೃದ್ಧಿ ಪಥದೆಡೆಗೆ ಮುನ್ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್​.ಕೆ. ಪಾಟೀಲ ಹೇಳಿದರು.
ಬುಧವಾರ ನಗರದ ಕೆ.ಎಚ್​.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಗದಗ ಜಿಲ್ಲೆಯಲ್ಲಿ ಹರ್​ ರ್​ ತಿರಂಗಾ ಅಭಿಯಾನ ಪ್ರಯುಕ್ತ ವಾಕ್​ಥಾನ್​ಗೆ ಚಾಲನೆ ನೀಡಿ ಮಾತನಾಡಿದರು.
ನಾವಿಂದು ಶಾಂತಿ, ಸೌಹಾರ್ದತೆಗೆ ಹಾಗೂ ಭಾತೃತ್ವಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸದೃಢ ಸಮಾಜವನ್ನು ನಿಮಿರ್ಸಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲ ಪ್ರಜೆಗಳೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.
ದೇಶಭಕ್ತಿ ಗೀತೆಗಳೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭವಾದ ತಿರಂಗಾ ಅಭಿಯಾನವು ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಗಾಂಧೀ ವೃತ್ತದಲ್ಲಿ ಬಂದು ತಲುಪಿತು. ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನರ್ಪೂಣ ಮುದುಕಮ್ಮನವರ ಸಂವಿಧಾನದ ಪೀಠಿಕೆಯನ್ನು ಪಠಿಸಿದರು. ವಾಕಥಾನ್​ ದಲ್ಲಿ ಎನ್​ಸಿಸಿ, ಎನ್​ಎಸ್​ಎಸ್​, ಮಾಜಿ ಸೈನಿಕರ ಸಂ, ಸ್ಕೌಟ್ಸ್​ ಮತ್ತು ಗೈಡ್ಸ, ಪೊಲೀಸ್​ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು. ಶಾಲಾ ಮಕ್ಕಳ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವಿವಿಧ ರೂಪಕಗಳು ಕಣ್ಮನ ಸೆಳೆದವು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ. ಎಸ್​. ನೇಮಗೌಡ, ಜಿಪಂ ಸಿಇಓ ಭರತ. ಎಸ್​, ಉಪವಿಭಾಗಾಧಿಕಾರಿ ಗಂಗಪ್ಪ. ಎಂ, ತಹಸೀಲ್ದಾರ ಶ್ರೀನಿವಾಸ ಕುಲಕಣಿರ್, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಶರಣು ಗೋಗೇರಿ, ರವಿ ಗುಂಜೀಕರ ಇತರರು ಇದ್ದರು.