ಜಿಲ್ಲೆ

ಮನುಷ್ಯನ ಮನಸ್ಥಿತಿ ಬದಲಾವಣೆ : ಸಮಾಜದ ಸುಧಾರಣೆ ಸಾಧ್ಯ

Gadag - Shivanand Hiremath
ಗದಗ : ಒಂದು ಜೀವವನ್ನು ಬದುಕಿಸಲು ಮತ್ತೊಂದು ಮುಗ್ದ ಜೀವವನ್ನು ಬಲಿ ತಗೆದಕೊಳ್ಳುವ ಪದ್ದತಿ ರಾಷ್ಟ್ರ, ಅಂತರಾಷ್ಟ್ರ ಮಟ್ಟದಲ್ಲಿ  ಹಿಂದಿನಿಂದಲೂ ನಡೆಯುತ್ತಿದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಕಾನೂನುಗಳು ಜಾರಿಯಾಗಿದ್ದು, ಯಾರಾದರೂ ದುಡ್ಡಿಗಾಗಿ ದೇಹದ ಅಂಗಾಂಗಗಳನ್ನು ಮಾರಾಟಕ್ಕೆ ಮುಂದಾದರೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಪ್ರಾಚಾರ್ಯ ಜೈಹನುಮಾನ ಎಚ್.ಕೆ ಹೇಳಿದರು.‌
ನಗರದ ಕೆ.ಎಲ್.ಇ ಸಂಸ್ಥೆಯ ಎಸ್.ಎ ಮಾನ್ವಿ‌ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರ ಯೂತ್ ರೆಡ್ ಕ್ರಾಸ್ ಹಾಗೂ ಕೆ.ಎಚ್. ಪಾಟೀಲ ಕಿಡ್ನಿ ಕೇರ್ ಸಂಯುಕ್ತಾಶ್ರಯದಲ್ಲಿ ಅಂಗಾಂಗ ದಾನ ಜಾಗೃತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಮಾನವ ಅಂಗ ಕಸಿ ಕಾಯಿದೆ 1994 ಪ್ರಕಾರ ಅಂಗಾಂಗ ಮಾರಾಟ ನಿಷೇಧಿಸಲಾಗಿದ್ದು, ಅಕ್ರಮ ಎಸಗಿದವರ ವಿರುದ್ಧ 5ರಿಂದ 10 ವರ್ಷ ಕಠಿಣ ಶಿಕ್ಷೆ ಮತ್ತು ಇಪ್ಪತ್ತು ಲಕ್ಷದಿಂದ ಒಂದು ಕೋಟಿ ರೂಪಾಯಿ ದಂಡ ವಿಧಿಸಲಾಗುವುದು.  ಹೀಗಾಗಿ ಅಂಗಾಂಗ ಮಾರಾಟಕ್ಕೆ ಅವಕಾಶವಿಲ್ಲ. ಕ್ಯಾನ್ಸರ್, ಎಚ್.ಐ.ವಿ ಕಾಯಿಲೆಯವರನ್ನು ಹೊರತುಪಡಿಸಿ, ವಯಸ್ಸು,ಲಿಂಗ, ಧರ್ಮದ ನಿರ್ಬಂಧವಿಲ್ಲದೆ ಯಾರು ಬೇಕಾದರೂ ದಾನಿಯಾಗಬಹುದು. ಜೀವಿಸಲು ಒಂದು ಕಿಡ್ನಿ ಸಾಕು ಮತ್ತು ವ್ಯಕ್ತಿ ಯಕೃತ್ತಿನ ಅಲ್ಪ ಭಾಗವನ್ನು ದಾನ ನೀಡಿದರೆ, ಈ ಭಾಗ ಮೂರು ವಾರದಲ್ಲಿ ಪುನರುತ್ಪತ್ತಿ ಆಗುತ್ತದೆ.  ಅಂಗಾಂಗ ದಾನ ಮಾಡಿದರೆ ದೇಹ ವಿರೂಪಗೊಳ್ಳುವುದಿಲ್ಲ. ಹೀಗಾಗಿ ದಾನದ ಬಳಿಕ ಶವಸಂಸ್ಕಾರದ ವಿಧಿವಿಧಾನಕ್ಕೆ ಯಾವ ಅಡ್ಡಿಯಾಗುವುದಿಲ್ಲ ಎಂಬ ಮನವರಿಗೆ ಮಾಡಬೇಕು‌ ಎಂದರು.
ಕೆ.ಎಚ್. ಪಾಟೀಲ ಕಿಡ್ನಿ ಕೇರ್ ಸಂಸ್ಥೆಯ ಲೀಡ್ ಸರ್ಜನ್  ಮತ್ತು ಕಾರ್ಯಕ್ರಮದ ನಿರ್ದೇಶ ಡಾ. ಅವಿನಾಶ ಓದುಗೌಡರ ಮಾತನಾಡಿ, ಮನುಷ್ಯ ಜೀವವಿದ್ದಾಗ ಜೀವಿಸಬಹುದು ಮತ್ತು ಅವನು ಮರಣದ ನಂತರ ಕೂಡ ಅವನ ಕೇವಲವೊಂದು ಅಂಗಾಂಗಗಳು ಇನ್ನೊಬ್ಬ ವ್ಯಕ್ತಿಯ ಶರೀರದಲ್ಲಿದ್ದು, ಜೀವಸುವ ಅಕಾಶ ಇದೆ. ಆದರೆ, ಯಾವುದೇ ರೀತಿಯ ಅಕ್ರಮ ಹಾಗೂ ಹಣಕ್ಕಾಗಿ ಅಂಗಾಂಗಗಳನ್ನು ದಾನ ಮಾಡದೇ ಅಗತ್ಯವಿರುವ ರೋಗಿಗಳಿಗೆ ತಾವು ಮರಣದ ನಂತರ ಕೇಲವೊಂದು ಅಂಗಾಂಗಗಳನ್ನು ದಾನ ಮಾಡಬಹುದು. ಇಲ್ಲಿ ಯಾವುದೇ ಸ್ವಾರ್ಥ ಮನೋಭಾವನೆ ಇಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸುವ ಅವಕಾಶವು ದೊರೆತ್ತಿದೆ. ಸತ್ತ ನಂತರ ದೇಹ ಮಣ್ಣಾಗುವ ಅಥವಾ ಸುಟ್ಟು ಬೂದಿಯಾಗುವ ಬದಲು ಮತ್ತೊಬ್ಬರ ದೇಹದಲ್ಲಿ ಬದುಕುಳಿಯಲು ಅವಕಾಶವಿದೆ. ಹೀಗಾಗಿ ಸಮಾಜದಲ್ಲಿ ಕಾನೂನು ವಿದ್ಯಾರ್ಥಿಗಳು ಸಮಾಜದಲ್ಲಿ ಈ ವಿಷಯಗಳ ಕುರಿತು ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.
ಸ್ಥಳೀಯ ಆಡಳಿತ ಮಂಡಳಿಯ ಚೇರ್ಮನ್ ಎಸ್.ಎ. ಮಾನ್ವಿ,  ಡಾ. ಪಿ. ನೂರಾಣಿ, ಜೆಟಿ ಕಾಲೇಜಿನ ಪ್ರಾಚಾರ್ಯ ಪಿ.ಜಿ. ಪಾಟೀಲ,  ಉಪನ್ಯಾಸಕ ಡಾ. ವಿಜಯ ಮುರದಂಡೆ, ಡಾ. ಜ್ಯೋತಿ ಸಿ.ವಿ, ಡಾ. ಶ್ರೀನಿವಾಸ ಪಾಲ್ಕೊಂಡ, ಶರತ್ ದರಬಾರೆ ಸೇರಿದಂತೆ ಇತರರಿದ್ದರು. ದೈಹಿಕ ನಿರ್ದೇಶಕ ಹಾಗೂ ಯೂತ್ ರೆಡ್ ಕ್ರಾಸ್ ಸಂಯೋಜಕ  ಡಾ. ಸಿ.ಬಿ. ರಣಗಟ್ಟಿಮಠ ಸ್ವಾಗತಿಸಿದರು. ವಿದ್ಯಾರ್ಥಿ ಚೈತ್ರಾ ಗೌಡರ ನಿರೂಪಿಸಿದರು