ವಿಜಯವಾಣಿ ಸುದ್ದಿಜಾಲ ಗದಗ
ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಕಾರ್ಯ ರೂಪಕ್ಕೆ ತರುವ ನಿಟ್ಟಿನಲ್ಲಿ ಕಾನೂನು ನೆರವು ಅಭಿರಕ್ಷಕರು, ಪ್ಯಾನೆಲ್ ವಕೀಲರು ಹಾಗೂ ಪ್ರಾಧಿಕಾರಕ್ಕೆ ನೂತನವಾಗಿ ಆಯ್ಕೆಯಾದ ಪಿಎಲ್ವಿ (ಅರೇಕಾಲಿಕ ಕಾನೂನು ಸ್ವಯಂ ಸೇವಕರು) ಕಾರ್ಯ ನಿರ್ವಹಿಸಬೇಕು ಎಂದು ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ಯಾನೆಲ್ ವಕೀಲರಿಗೆ, ಕಾನೂನು ನೆರವು ಅಭಿರಕ್ಷಕರು ಹಾಗೂ ನೂತನವಾಗಿ ಆಯ್ಕೆ ಆದ ಅರೇಕಾಲಿಕ ಕಾನೂನು ಸ್ವಯಂ ಸೇವಕರಿಗಾಗಿ ಗುರುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ, ದೀನದಲಿತರಿಗೆ, ಬಡವರಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮತ್ತು ನೆರವು ನೀಡುವುದು ಪ್ರಾಧಿಕಾರದ ಉದ್ದೇಶವಾಗಿದೆ. ಈ ತರಬೇತಿಯ ಸದುಪಯೋಗ ಪಡೆದು ಪ್ಯಾನಲ್ ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕ ವಕೀಲರು ಈಗಾಗಲೇ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಉಚಿತ ಪ್ರಕರಣಗಳ ಬಗ್ಗೆ ಪಕ್ಷ ಗಾರರಿಗೆ ಅವರ ಪ್ರರಕರಣಗಳ ಬಗ್ಗೆ ಮಾಹಿತಿ ಹಾಗೂ ಮುದ್ದತ್ ದಿನಾಂಕಗಳ ಬಗ್ಗೆ ತಪ್ಪದೇ ಮಾಹಿತಿ ನೀಡಬೇಕು. ಪಕ್ಷಗಾರರ ಹಿತಕಾಯಬೇಕು ಎಂದರು.
ನೇಮಕಗೊಂಡ ಪಿಎಲ್ವಿ ಗಳು ಪ್ರಾಧಿಕಾರದ ಉದ್ದೇಶಗಳ ಬಗ್ಗೆ, ಉಚಿತ ಕಾನೂನು ನೆರವಿನ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಸಮಾಜದ ಕಡೆಯ ವ್ಯಕ್ತಿಗೆ, ಅಸಹಾಯಕರಿಗೆ ಉಚಿತ ಕಾನೂನು ಸೇವೆಗಳ ಸೌಲಭ್ಯಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆ ಕೇಂದ್ರಗಳ ಸೌಲಭ್ಯಗಳ ಸದುಪಯೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಸವರಾಜ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಸಿ. ಎಸ್. ಶಿವನಗೌಡ್ರ ಮಾತನಾಡಿ, ಕಾನೂನು ಸೇವೆಗಳ ಪ್ರಾಧಿಕಾರಗಳ ಅಧಿನಿಯಮದಡಿ ಫಲಾನುಭವಿಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗೆಗೆ ನಾಗರಿಕರಲ್ಲಿ ಅರಿವನ್ನು ಮೂಡಿಸಬೇಕು. ನಾಗರೀಕರಿಗೆ ಲೋಕ ಅದಾಲತ್ನಲ್ಲಿ ತಮ್ಮ ಪ್ರಕರಣ ಇತ್ಯರ್ಥಗೊಂಡರೆ ನ್ಯಾಯಾಲಯಕ್ಕೆ ತುಂಬಿದ ಕೋರ್ಟ ಫೀ ಸಂರ್ಪೂಣ ಮರಳಿ ನೀಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಮುಂದೆ ಅಪೀಲು ಇರುವುದಿಲ್ಲ ಎಂಬುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಅರ್ಹ ವ್ಯಕ್ತಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯದಿದ್ದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡಿಬೇಕು. ಪ್ರಾಧಿಕಾರದಿಂದ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲಾ ವಕೀಲರ ಸಂದ ಅಧ್ಯಕ್ಷ ಎಂ. ಐ. ಹಿರೇಮನಿಪಾಟೀಲ ಮಾತನಾಡಿ, ಪಿಎಲ್ವಿಗಳು ಇಂದಿನ ತರಬೇತಿಯಿಂದ ಅಗತ್ಯ ಮಾಹಿತಿ ಪಡೆದು ಸಮಾಜಮುಖಿ ಕಾರ್ಯ ನಿರ್ವಹಿಸಬೇಕು. ತಮ್ಮ ಕ್ಷೇತ್ರದಲ್ಲಿ ಅನ್ಯಾಯಕ್ಕೆ ಒಗಾದವರ ಪರವಾಗಿ ನ್ಯಾಯ ದೊರಕಿಸುವಲ್ಲಿ ಶ್ರಮಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿ. ಸಿ. ರೇಶ್ಮಿ ಮಾತನಾಡಿ ಸ್ವತಂತ್ರ ನಂತರ ಭಾರತದಲ್ಲಿ ಅಳವಡಿಸಿಕೊಳ್ಳಲಾಗಿರುವ ಸಂವಿಧಾನರಚನೆ ಬಗ್ಗೆ ವಿವರಿಸಿ, ಬಾಲಕಾಮಿರ್ಕತೆ, ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ, ಸಂತ್ರಸ್ಥರಿಗೆ ಪರಿಹಾರ ಯೋಜನೆ ಬಗ್ಗೆ ಪ್ಯಾನೆಲ್ ವಕೀಲರಿಗೆ, ಕಾನೂನು ನೆರವು ಅಭಿರಕ್ಷಕರು ಹಾಗೂ ನೂತನವಾಗಿ ಆಯ್ಕೆಯಾದ ಪಿಎಲ್ವಿಗಳ ಕಾರ್ಯವ್ಯಾಪ್ತಿ, ಕರ್ತವ್ಯಗಳ ಬಗ್ಗೆ ಉಪನ್ಯಾಸ ನೀಡಿದರು.
ಪರಶುರಾಮ ಕಳಗಣ್ಣವರ, ಬಿ. ಎಂ. ಕುಕನೂರ ಇತರರು ಇದ್ದರು.