ಜಿಲ್ಲೆ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ

Gadag - Shivanand Hiremath

ಗದಗ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಬುಧವಾರ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗು ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರ ನಿಗದಿ ಮಾಡಿದ ದಿನದಂದು ಜಿಲ್ಲಾಡಳಿತ ಭವನದಲ್ಲಿ ಸಾಂಕೇತಿಕವಾಗಿ ಜಯಂತಿ ಜರುಗುವುದು ಮುಂದೆ ಸಮುದಾಯದವರು ತಿರ್ಮಾನಿಸಿದಂತೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಕುರಿತು ಅವರ ಸಾಧನೆ ಕುರಿತು ಮುಂದಿನ ಪೀಳಿಗೆಗೆ ತಿಳಿಸಿ ಕೊಡುವಂತೆ ಆಗಬೇಕು ಹಾಗಾಗಿ ಸಮಾಜ ಇಲಾಖೆ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕುರಿತು ಸಣ್ಣ ಕಥೆಗಳ ಬರವಣಿಗೆಯ ಸ್ಪರ್ಧೆ ಏರ್ಪಡಿಸಿ ಆಯ್ದ ಕಥೆಗಳನ್ನು ಸಂಕಲನದಲ್ಲಿ ಪ್ರಕಟಿಸುವಂತೆ ಹೇಳಿದರು.
ಸಮುದಾಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ,ಸಾಹಿತಿಗಳು, ಪಿ ಎಚ್ ಡಿ ಮಾಡಿದಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು,ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ವಾಲ್ಮೀಕಿ ಅವರ ಕುರಿತು ಸುರ್ಧಿಘವಾಗಿ ಅಧ್ಯಯನ ಮಾಡಿದ ಇಬ್ಬರು ಸಂಪನ್ಮೂಲ ವ್ಯಕ್ತಿಗಳ ಹೆಸರುಗಳನ್ನು ತಿಳಿಸಲು ಸಮುದಾಯದ ಮುಖಂಡರಿಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ನಂದಾ ಹನಬರಟ್ಟಿ ಮಾತನಾಡಿ ಪ್ರತಿ ವರ್ಷದಂತೆ ಶ್ರೀ ವಾಲ್ಮೀಕಿ ಜಯಂತಿಯAದು ಪರಿಶಿಷ್ಟ ಪಂಗಡದ ಏಳಿಗಾಗಿ ಶ್ರಮೀಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ , ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಿನಾಂಕ ಅಕ್ಟೋಬರ್7 ರಂದು ಜರಗುವ ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿಯAದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತದೆ ಈ ಪ್ರಶಸ್ತಿಗಾಗಿ ಸಪ್ಟಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಭೆಗೆ ತಿಳಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಭೀಷ್ಮ ಕೆರೆಯ ಹತ್ತಿರುವಿರುವ ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನೇಮಕ ಮಾಡಲಾಗಿದೆ,ಅದನ್ನು ಅಭಿವೃದ್ಧಿ ಪಡಿಸಬೇಕು,ಜಯಂತಿ ದಿನದಂದು ಮೆರವಣಿಗೆಗೆ ಕಲಾವಿದರ ತಂಡವನ್ನು ಒದಗಿಸಿಕೊಡಬೇಕು,ಜಿಲ್ಲೆಯಲ್ಲಿ ಶ್ರೀ ವಾಲ್ಮೀಕಿ ಭವನಗಳ ಕಾಮಗಾರಿಗಳು ಚುರುಕುಗೊಳಬೇಕು ಎಂದು ಸಭೆಗೆ ತಿಳಿಸಿದರು.

ಇದನ್ನು ಆಲಿಸಿದ ಜಿಲ್ಲಾಧಿಕಾರಿಗಳು ಶ್ರೀ ಮಹರ್ಷಿ ವಾಲ್ಮೀಕಿ ವೃತ್ತಕ್ಕೆ ಸಂಬAಧಿಸಿದAತೆ ಇನ್ನುಳಿದ ಸಮಸ್ಯೆಗಳನ್ನು ಚರ್ಚಿಸಲು ಮತ್ತೋಂದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್,ಡಿವೈಎಸ್ ಪಿ ಮುರ್ತುಜಾ ಖಾದ್ರಿ,ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ,ಎ ಸಿ ಗಂಗಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಶ್ರೀ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಪರಿಶಿಷ್ಟ ವರ್ಗ,ಪರಿಶಿಷ್ಟ ಜಾತಿ ಗಣ್ಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಿ ಶ್ರೀ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.