ಚಂದ್ರಿಕಾ ಬಸವರಾಜ ಕಟಗೇರಿ ಎಂಬ ವೆಂಕಟಾಪೂರದ 20 ವರ್ಷದ ವಿದ್ಯಾರ್ಥಿನಿ ಸಹ ಗದುಗಿನ ಖಾಸಗಿ ಕಾಲೇಜಿನಲ್ಲಿ ಬಿ.ಎ ಎರಡನೇ ಸೆಮ್ ವ್ಯಾಸಂಗ ಮಾಡುತ್ತಿದ್ದಾಳೆ. ರಜಾದಿನಗಳಲ್ಲಿ ನರೇಗಾ ಸಮುದಾಯ ಕಾಮಗಾರಿಯಲ್ಲಿ ಕೂಲಿಕಾರಳಾಗಿ ದುಡಿದು ಬಂದ ಕೂಲಿಮೊತ್ತದಿಂದ ತನ್ನ ಕಾಲೇಜು ವ್ಯಾಸಂಗದ ಬಸ್ ಪಾಸ್, ಶುಲ್ಕ ಪಾವತಿ ಖರ್ಚಿನ ಜೊತೆಗೆ ಹೈಸ್ಕೂಲು, ಪ್ರಾಥಮಿಕ ಶಾಲೆಗಳಲ್ಲಿ ಕಲಿಯುತ್ತಿರುವ ತಮ್ಮಂದಿರ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ನಿಭಾಯಿಸುತ್ತಿದ್ದಾಳೆ. ತಂದೆಗೆ ಹುಷಾರಿಲ್ಲದಾಗ ಮನೆಮಂದಿಯೆಲ್ಲ ನರೇಗಾ ಯೋಜನೆಯಡಿ ದುಡಿದು ಬಂದ ಹಣದಿಂದಲೇ ವೈದ್ಯಕೀಯ ಖರ್ಚನ್ನು ಸಹ ನಿಭಾಯಿಸಿದ್ದೇವೆ ಎನ್ನುತ್ತಾಳೆ.
ವೆಂಕಟಾಪೂರ ಗ್ರಾಮದ ಮತ್ತೊಬ್ಬ ಕೂಲಿಕಾರ ಮಹಿಳೆ ಶೋಭಾ ಗೋಣಿಸ್ವಾಮಿ ಸಹ ಪದವಿ ಮುಗಿಸಿದ್ದು ನರೇಗಾ ಕೂಲಿಮೊತ್ತ ಬಹು ಉಪಯೋಗಕಾರಿಯಾಗಿದೆ ಎನ್ನುತ್ತಾರೆ. ಕೃಷಿ ಕುಟುಂಬದ ನಾನು ಈಗಾಗಲೇ ಪದವಿ ಮುಗಿಸಿದ್ದು ಕೆಲಸದ ಹುಡುಕಾಟದಲ್ಲಿದ್ದೇನೆ. ನರೇಗಾ ಸಮುದಾಯ ಕಾಮಗಾರಿಯಲ್ಲಿ ತೊಡಗಿಕೊಳ್ಳುವುದರಿಂದ ಬಂದ ಕೂಲಿ ಹಣ ಸಂದರ್ಶನಗಳಿಗೆ ಹಾಜರಾಗಲು ಬಹಳ ಸಹಕಾರಿಯಾಗಿದ್ದು, ಕುಟುಂಬ ನಿರ್ವಹಣೆಗೆ ನೆರವಾಗಲು ಸಹ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸುತ್ತಾರೆ.
ನರೇಗಾ ಕೂಲಿಮೊತ್ತ 370 ರೂಪಾಯಿಗಳಿಗೆ ಹೆಚ್ಚಳವಾಗಿರುವುದು ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಿದೆ. ಆ ಮೂಲಕ ಪದವಿ ಶಿಕ್ಷಣಕ್ಕೆ ಹಣ ಹೊಂದಿಸಲು ಪರಿತಪಿಸುತ್ತಿದ್ದ ಬಡಕುಟುಂಬದ ವಿದ್ಯಾರ್ಥಿಗಳಿಗೆ ನರೇಗಾ ಯೋಜನೆ ಕೈಹಿಡಿದಿದೆ. ಶುಲ್ಕ ಕಟ್ಟಲು ಹಾಗೂ ಕಲಿಕೆಯ ನಂತರ ಕೆಲಸ ಹುಡುಕಲು ಉದ್ಯೋಗಖಾತ್ರಿ ಯೋಜನೆ ನೆರವಾಗಿದ್ದು, ತಮ್ಮ ಶಿಕ್ಷಣದ ಜೊತೆಗೆ ಸಹೋದರ ಸಹೋದರಿಯರ ವ್ಯಾಸಂಗ ಮುಂದುವರೆಸಲು ಸಹ ಅವರಿಗೆ ಭರವಸೆ ಮೂಡಿಸಿದೆ.
ಕೋಟ್ __ ಮುಂಡರಗಿ ತಾಲೂಕಿನ ಗ್ರಾಪಂಗಳಲ್ಲಿ ಐಇಸಿ ಚಟುವಟಿಕೆ ಮೂಲಕ ಸಾಕಷ್ಟು ಜಾಗೃತಿ ಕಾರ್ಯಕ್ರಮ ನಡೆಸಲಾಗಿದ್ದು, ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ತಾಲೂಕಿನಲ್ಲಿ ವಿಶೇಷಚೇತನರಿಗೆ ಆರ್ಥಿಕ ಗುಣಮಟ್ಟ ಸುಧಾರಿಸಲು ಹಾಗೂ ಪದವಿ ವಿದ್ಯಾರ್ಥಿನಿಯರ ಜೊತೆಗೆ ಅವರ ಸಹೋದರ/ರಿಯರಿಗೂ ನರೇಗಾ ಕೂಲಿಮೊತ್ತ ಶೈಕ್ಷಣಿಕ ವೆಚ್ಚಕ್ಕೆ ಕಾರಣವಾಗಿರುವುದು ಖುಷಿಯ ಸಂಗತಿ. ವಿಶ್ವನಾಥ ಹೊಸಮನಿ ತಾಪಂ ಇಓ, ಮುಂಡರಗಿ