ಗದಗ: ಗದಗ-ಬೆಟಗೇರಿ ಅವಳಿ ನಗರದ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿ ಸಂಚಾರವೇ ದುಸ್ತರವಾಗಿದೆ. ಇನ್ನೂ ೧೫ ದಿನಗಳಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ಪೌರಾಯುಕ್ತರ ನೇತೃತ್ವದಲ್ಲಿ ಗುಂಡಿ ಮುಚ್ಚುವ ಕಾರ್ಯ ಆರಂಭವಾಗದೇ ಇದ್ದರೆ ಜನಾಂದೋಲನ ಕೈಕೊಳ್ಳುವುದಾಗಿ ಬಿಜೆಪಿ ಮುಖಂಡರಾದ ವಿಜಯಕುಮಾರ ಗಡ್ಡಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಸ್ತೆಗಳ ಗುಂಡಿ ಸಮಸ್ಯೆ ಇಂದು-ನಿನ್ನೆಯದ್ದಲ್ಲ, ಸುದೀರ್ಘ ಸಮಯದಿಂದ ಗದಗ-ಬೆಟಗೇರಿ ನಾಗರಿಕರು ಈ ಅವ್ಯವಸ್ಥೆಯನ್ನು ಅನುಭವಿಸುತ್ತಿದ್ದಾರೆ. ಗದಗ-ಬೆಟಗೇರಿ ಅವಳಿ ನಗರದ ಯಾವೊಂದು ಮುಖ್ಯರಸ್ತೆಯೂ ಗುಂಡಿಗಳಿAದ ಮುಕ್ತವಾಗಿಲ್ಲ, ಬದಲಿಗೆ ದಿನೇ ದಿನೇ ರಸ್ತೆಗುಂಡಿಗಳು ಉದ್ಭವವಾಗುತ್ತಿವೆ. ವಾಹನ ಚಲಾವಣೆಗೆ ಅಡಚಣೆ ಉಂಟಾಗಿ ದಿನಕ್ಕೊಂದು ಕಡೆ ಅಪಘಾತ ಸಂಭವಿಸಿ ವಾಹನ ಸವಾರರು ಗಾಯಗೊಳ್ಳುತ್ತಿದ್ದಾರೆ. ಮಳೆಗಾಲ ಇದಾಗಿರುವುದರಿಂದ ರಸ್ತೆಗಳ ಗುಂಡಿಗಳಲ್ಲಿ ನೀರು ತುಂಬಿಕೊAಡು ವಾಹನ ಸವಾರರಿರಲಿ, ಪಾದಚಾರಿಗಳೇ ಸಂಕಷ್ಟ ಅನುಭವಿಸುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷö್ಯವೋ ಅಥವಾ ಅಧಿಕಾರಿಗಳ ನಿಷ್ಕಾಳಜಿಯೋ ಗೊತ್ತಿಲ್ಲ, ಒಟ್ಟಿನಲ್ಲಿ ಜನ ಹಾಳಾದ ರಸ್ತೆಗಳಿಂದ ತೊಂದರೆ ಅನುಭವಿಸುವಂತಾಗಿದೆ. ೧೫ ದಿನದ ಒಳಗಾಗಿ ಎಚ್ಚೆತ್ತುಕೊಂಡು ಗುಂಡಿ ಮುಚ್ಚುವ ಕಾರ್ಯ ಮಾಡದಿದ್ದರೆ ಜನರಿಂದ ದೇಣಿಗೆ ಸಂಗ್ರಹಿಸಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.