Oplus_131072 
ಜಿಲ್ಲೆ

ವಾಣಿಜ್ಯ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದಿಂದ ಮತದಾನ ದಿನಾಚರಣೆ ಪ್ರತಿಜ್ಞಾವಿಧಿ ಕಾರ್ಯಕ್ರಮ

Gadag - Shivanand Hiremath
Gadag: ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಮತದಾರ ದಿನಾಚರಣೆ ಮತ್ತು ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಆರಂಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಕೆ ಗಿರಿರಾಜ ಕುಮಾರ ರವರು ಚಾಲನೆ ನೀಡಿ ಮಾತನಾಡಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಪ್ರತಿ ವರ್ಷ ಭಾರತದಲ್ಲಿ ಜನವರಿ 25 ರಂದು ಆಚರಣೆ ಮಾಡಲಾಗುತ್ತದೆ. 1950 ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ನೆನಪಿಗಾಗಿ ಈ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. 2011 ರಲ್ಲಿ ಮೊದಲ ಬಾರಿಗೆ ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಣೆ ಮಾಡಲಾಯಿತು.ದೇಶದ ಎಲ್ಲಾ ಮತದಾರರಿಗೆ ಈ ರಾಷ್ಟ್ರೀಯ ಮತದಾರರ ದಿನವನ್ನು ಅರ್ಪಿಸಲಾಗುತ್ತದೆ. ಜೊತೆಗೆ ಮತದಾರರ ದಿನದ ಮಹತ್ವವನ್ನು ತಿಳಿಸಲಾಗುತ್ತದೆ. ಮತ ಚಲಾವಣೆಯ ಮಹತ್ವ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆಯ ಮಹತ್ವದ ಬಗ್ಗೆ ಈ ದಿನ ಜಾಗೃತಿ ಮೂಡಿಸಲಾಗುತ್ತದೆ ಎಂದು ತಮ್ಮ ಉದ್ಘಾಟನಾ ನುಡಿಗಳಲ್ಲಿ ಹಂಚಿಕೊಂಡರು.
  ಮಹಾವಿದ್ಯಾಲಯದ ಉಪ ಪ್ರಾಚಾರ್ಯರು ಹಾಗೂ ಐಕ್ಯುಎಸಿ ಕೋ-ಆರ್ಡಿನೇಟರ್ ಡಾ. ವಿ ಟಿ ನಾಯ್ಕರ್ ರವರು ಮಾತನಾಡಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಪ್ರತಿ ವರ್ಷ ಭಾರತದಲ್ಲಿ ಜನವರಿ 25 ರಂದು ಆಚರಣೆ ಮಾಡಲಾಗುತ್ತದೆ. 1950 ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ನೆನಪಿಗಾಗಿ ಈ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. 2011 ರಲ್ಲಿ ಮೊದಲ ಬಾರಿಗೆ ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಣೆ ಮಾಡಲಾಯಿತು. ಅಂದಿನ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್ ಅವರು ಭಾರತದ ಚುನಾವಣಾ ಆಯೋಗದ 61ನೇ ಸಂಸ್ಥಾಪನಾ ದಿನದಂದು ಈ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲು ಚಾಲನೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ.  ಬಾಹುಬಲಿ ಪಿ ಜೈನರವರು ಮಾತನಾಡಿ ರಾಷ್ಟ್ರೀಯ ಮತದಾರರ ದಿನ ಆಚರಣಣೆ ಮೂಲ ಉದ್ದೇಶ ಹೊಸ ಮತದಾರರನ್ನು ಸೆಳೆಯುವುದು, ಉತ್ತೇಜಿಸುವುದು ಹಾಗೂ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಇದಲ್ಲದೇ ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವುದು ಮತ್ತು ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಈ ದಿನ ಹೊಸ ಮತದಾರರಿಗೆ  ಹೊಸ ಮತದಾರರ ಗುರುತಿನ ಚೀಟಿಯನ್ನು ನೀಡಲಾಗುತ್ತದೆ ಹೀಗಾಗಿ ಪ್ರತಿಯೊಬ್ಬ ಭಾರತೀಯರು ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ ನಮ್ಮ ಆಳುವ ಶ್ರೇಷ್ಠ ಜನ ನಾಯಕನನ್ನ ಆಯ್ಕೆ ಮಾಡಬೇಕೆಂದು ಸ್ವಯಂಸೇವಕ ಸೇವಕಿಯರನ್ನು ಉದ್ದೇಶಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಶ್ರೀ ರವೀಶ್ ಶ್ರೀ ಬಸವರಾಜ್ ಹಳ್ಳಿಕೇರಿ. ವಿದ್ಯಾರ್ಥಿ ಮುಖಂಡರುಗಳಾದ ಕು. ಜನಕ ರೆಡ್ಡಿ ಎಚ್, ಆದರ್ಶ್ ಅಕ್ಕಿ , ಅಭಿಷೇಕ್ ಮಾಗಡಿ ಮಹಾವಿದ್ಯಾಲಯದ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.