ಗದಗ : ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81 ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15 ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವ ಇದೇ ಜೂ. 12 ರಿಂದ 16ರ ವರೆಗೆ ಜರುಗಲಿವೆ ಎಂದು ವಿರೇಶ್ವರ ಪುಣ್ಯಾಶ್ರಮದ ಪೂಜ್ಯಶ್ರೀ ಕಲ್ಲಯ್ಯಜ್ಜನವರು ಹೇಳಿದರು.
ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜೂ. 12 ರಂದು ಗುರುವಾರ ಸಂಜೆ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಜರಗುವದು. ಈ ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಮಹಾಪೀಠದ ಪೂಜ್ಯಶ್ರೀ ಜ. ಡಾ. ಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಾನಿಧ್ಯವಹಿಸುವರು.
ಸೂಡಿಯ ಜುಕ್ತಿ ಹಿರೇಮಠದ ಪೂಜ್ಯಶ್ರೀ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಚಳಗೇರಿ ಹಿರೇಮಠದ ಪೂಜ್ಯಶ್ರೀ ವೀರ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಮುಂತಾದವರು ಭಾಗವಹಿಸುವರು.
ಇದೇ ಸಂದರ್ಭದಲ್ಲಿ “ಪುಟ್ಟರಾಜ ಋಣಭಾರ” ಸಂಗೀತ ಧನಿಸುರುಳಿ ಮತ್ತು “ಗೀತ ಮಂದಾರ” ಗ್ರಂಥ ಬಿಡುಗಡೆಗೊಳ್ಳುವುದು. ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರಗುವದು.ಸಾನಿಧ್ಯವನ್ನು ಅಡ್ನೂರ-ರಾಜೂರ ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯರು ಸಾನಿಧ್ಯವಹಿಸುವರು. ಪೂಜ್ಯಶ್ರೀ ಕಲ್ಲಯ್ಯಜ್ಜನವರು ಅಧ್ಯಕ್ಷತೆ ವಹಿಸುವರು.ರಾತ್ರಿ 10.30 ಗಂಟೆಗೆ “ಸೊನ್ನಲಿಗೆ ಶ್ರೀ ಸಿದ್ದರಾಮೇಶ್ವರ” ನಾಟಕ ಪ್ರದರ್ಶನಗೊಳ್ಳುವುದು.
ಜೂನ್ 13 ರಂದು ಶುಕ್ರವಾರ ಸಂಜೆ 6 ಗಂಟೆಗೆ ಕೀರ್ತನ ಸಮ್ಮೇಳನ ಹಾಗೂ ಅಂಧರಗೋಷ್ಠಿ ಜರುಗುವುದು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶಿರಹಟ್ಟಿ ಮಹಾಸಂಸ್ಥಾನಮಠದ ಪೂಜ್ಯಶ್ರೀ ಜ.ಫಕೀರ ದಿಂಗಾಲೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸುವರು. ಗದುಗಿನ ಶಿವಾನಂದ ಮಠದ ಪೂಜ್ಯಶ್ರೀ ಜ. ಅಭಿನವ ಶಿವಾನಂದ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವವರು. ಹೋತನಹಳ್ಳಿ ಸಿಂದಗಿ ಶಾಖಾಮಠದ ಪೂಜ್ಯಶ್ರೀ ಶಂಭುಲಿAಗ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕಳಕಪ್ಪ ಬಂಡಿ, ಶಿವಕುಮಾರ ಪಾಟೀಲ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿರುವರು. ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರುಗುವುದು. ಈ ಕಾರ್ಯಕ್ರಮದಲ್ಲಿ ಕಪೋತಗಿರಿಯ ನಂದಿವೇರಿಮಠದ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವವರು. ಅಡ್ನೂರ-ರಾಜೂರ ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಸಮ್ಮುಖ ವಹಿಸುವರು. ರಾತ್ರಿ 10.30 ಗಂಟೆಗೆ ಗದುಗಿನ ಕುಮಾರೇಶ್ವರ ಕೃಪಾಪೋಷಿತ ಪಂ. ಪಂಚಾಕ್ಷರಿ ಗವಾಯಿಗಳವರ ನಾಟ್ಯ ಸಂಘದವರಿAದ “ಬಂದರ ನೋಡ ಬಂಗಾರಿ” ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳುವುದು.
ಜೂನ್ 14 ರಂದು ಶನಿವಾರ ಸಂಜೆ 6 ಗಂಟೆಗೆ ಕೀರ್ತನ ಸಮ್ಮೇಳನ ಕಾರ್ಯಕ್ರಮ ಜರುಗುವುದು ಈ ಕಾರ್ಯಕ್ರಮದ ಸಾನಿಧ್ಯವನ್ನು ಮುಂಡರಗಿ ಸಂಸ್ಥಾನಮಠದ ಪೂಜ್ಯಶ್ರೀ ಜ. ನಾಡೋಜ ಡಾ. ಶ್ರೀ ಅನ್ನದಾನೀಶ್ವರ ಶಿವಯೋಗಿಗಳವರು ಸಾನಿಧ್ಯ ವಹಿಸುವರು ಹೊಸಳ್ಳಿ ಬೂದೀಶ್ವರ ಸಂಸ್ಥಾನಮಠದ ಪೂಜ್ಯಶ್ರೀ ಅಭಿನವ ಬೂದೀಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವವರು. ಕನಕಗಿರಿ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಪೂಜ್ಯಶ್ರೀ ಡಾ. ಚನ್ನಮಲ್ಲ ಮಹಾಸ್ವಾಮಿಗಳು ಹಾಗೂ ಕಪೋತಗಿರಿ ನಂದಿವೇರಿ ಶ್ರೀಮಠ ಸಂಸ್ಥಾನದ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ನೇತೃತ್ವವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್. ಕೆ. ಪಾಟೀಲ, ರೋಣ ಶಾಸಕರಾದ ಜಿ.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಜಿಲ್ಲಾ ಪಂಚಾಯತಿ ಸಿಇಒ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ದಾನಶೂರ ಬಸರಿಗಿಡದ ವೀರಪ್ಪನವರ ದಂಪತಿಗಳ ಶಿಲಾಮಂಟಪ ಉದ್ಘಾಟನೆ ಜರುಗಲಿದೆ.
ದಾನಶೂರ ಬಸರಿಗಿಡದ ವೀರಪ್ಪನವರ ಟ್ರಸ್ಟ್ ವತಿಯಿಂದ ಪ್ರಥಮ ಬಾರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಮತ್ತು ಪೂಜ್ಯಶ್ರೀ ಕಲ್ಲಯ್ಯಜ್ಜನವರಿಗೆ ತುಲಾಭರ ಸೇವೆ ಜರುಗಲಿದೆ. ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಕಪೋತಗಿರಿ ನಂದಿವೇರಿ ಶ್ರೀಮಠದ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ವಹಿಸುವರು. ಅಡ್ನೂರ-ರಾಜೂರ ಬೃಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಅಧ್ಯಕ್ಷತೆ ವಹಿಸುವವರು ಇದೇ ಸಂದರ್ಭದಲ್ಲಿ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ಜರುಗಲಿದೆ. ರಾತ್ರಿ 10 ಗಂಟೆಗೆ ಸ್ವರ ಸಮಾರಾಧನೆ ಸಂಗೀತ ಸಭೆ ಜರುಗಲಿದೆ.
ಜೂನ್ 15 ರಂದು ಸಂಜೆ 6 ಗಂಟೆಗೆ ಶಿವಾನುಭವ ಗೋಷ್ಠಿ ಜರುಗಲಿದೆ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗದುಗಿನ ತೋಂಟದಾರ್ಯ ಶ್ರೀಮಠದ ಪೂಜ್ಯಶ್ರೀ ಜ. ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ಇಳಕಲ್ಲ- ಚಿತ್ತರಗಿ ಸಂಸ್ಥಾನಮಠದ ಪೂಜ್ಯಶ್ರೀ ಗುರುಮಹಾಂತ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಜಗದೀಶ ಶೆಟ್ಟರ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರ, ಮಾಜಿ ಸಚಿವ ಬಿ. ಶ್ರೀರಾಮುಲು, ಎಸ್.ಎಸ್. ಪಾಟೀಲ, ಬಿ.ಆರ್.ಯಾವಗಲ್, ಎನ್.ಎಚ್. ಕೋನರೆಡ್ಡಿ ಸೇರಿದಂತೆ ಮುಂತಾದರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ “ಸಪ್ತಸ್ವರ ದೀಶ’ ಗ್ರಂಥ ಬಿಡುಗಡೆಯಾಗಲಿದೆ.
ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ರಾತ್ರಿ 10 ಗಂಟೆಗೆ ಸಂಗೀತ ಸಭೆ ಸ್ವರ ಸಮಾರಾಧನೆ ಕಾರ್ಯಕ್ರಮ ಜರುಗಲಿದೆ.
ಜೂನ್ 16 ರಂದು ಸಂಜೆ 6 ಗಂಟೆಗೆ ಉಭಯ ಶ್ರೀಗಳ ಮಹಾರಥೋತ್ಸವ ಜರಗುವದು. ನಂತರ ವಿಶೇಷ ಕಾರ್ಯಕ್ರಮ ಧರ್ಮೋತ್ತೇಜಕ ಮಹಾಸಭೆ ಜರುಗುವುದು ಈ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಶ್ರೀಮಠದ ಪೂಜ್ಯಶ್ರೀ ಜ. ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ಧಾರವಾಡ ಮುರುಘಾ ಮಠದ ಪೂಜ್ಯಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಗಂಗಾವತಿ ಕಲ್ಮಠದ ಪೂಜ್ಯಶ್ರೀ ಡಾ.ಕೊಟ್ಟೂರು ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಮುಖ್ಯ ತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಸಿ.ಸಿ. ಪಾಟೀಲ, ಮಹೇಶ ಟೆಂಗಿನಕಾಯಿ ಸೇರಿದಂತೆ ಮುಂತಾದವರು ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ 2025 ನೇ ಸಾಲಿನ ಪಂಚಾಕ್ಷರ ಗವಾಯಿಗಳವರ ಪುಣ್ಯಸ್ಮರಣೋತ್ಸವದಲ್ಲಿ ಕುಷ್ಟಗಿ ತಾಲೂಕಿನ ಬಿಳೇಕಲ್‌ನ ರಾಮಣ್ಣ ನಸಬಿ (ಸಂಗೀತ ಕ್ಷೇತ್ರ) ಅವರಿಗೆ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಅದೇರೀತಿ ಜಿಗಳೂರಿನ ವಿರೂಪಾಕ್ಷಯ್ಯಶಾಸ್ತಿç ಹಿರೇಮಠ-(ಪ್ರವಚನ ಕ್ಷೇತ್ರ), ಬೆಂಗಳೂರಿನ ರಾಜು ಎಮ್ಮಿಗನೂರ (ಗಾಯನ ಕ್ಷೇತ್ರ) ಗದುಗಿನ ಪ್ರಕಾಶ ಬಸರಿಗಿಡದ( ಭೂದಾನ ಕ್ಷೇತ್ರ) ಅವರುಗಳಿಗೆ “ಕುಮಾರಶ್ರೀ” ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಜರುಗುವುದು. ರಾತ್ರಿ 10.30 ಗಂಟೆಗೆ ಸಂಗೀತ ಕಾರ್ಯಕ್ರಮ ನೆರವೇರಲಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಡಾ.ಕಲ್ಲಯ್ಯಜ್ಜನವರು ಹೇಳಿದರು.
ಈ ಸುದ್ದಿಗೋಷ್ಠಿಯಲ್ಲಿ ವೀರೇಶ್ವರ ಪುಣ್ಯಾಶ್ರಮ ಗದಗ- ದಾವಣಗೆರೆ ಸೋಲ್ ಟ್ರಸ್ಟ್ನ ಅಧ್ಯಕ್ಷರಾದ ನಿಂಗಪ್ಪ ಕೆಂಗಾರ, ಪದಾಧಿಕಾರಿಗಳಾದ ಪ್ರಕಾಶ ಬಸರಿಗಿಡದ, ಪ್ರಭುಲಿಂಗಯ್ಯ ಹಿರೇಮಠ, ಪರಶುರಾಮ ಕಟ್ಟಿಮನಿ, ಪುಣ್ಯಾಶ್ರಮದ ವ್ಯವಸ್ಥಾಪಕರಾದ ಹೇಮರಾಜಶಾಸ್ತಿç ಹಿರೇಮಠ ಹೆಡಿಗ್ಗೊಂಡ, ಎಂ.ಕಲ್ಲಿನಾಥ ಶಾಸ್ತಿçಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.