ಜಿಲ್ಲೆ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ.

ಧಾರ್ಮಿಕ ಪಠಣ ಸಂಸ್ಕೃತದಲ್ಲಿ  ಕೆ. ಭಾನುಶ್ರೀ ದ್ವಿತೀಯ ಸ್ಥಾನ.
ಗದಗ: ಗದಗ ಬೆಟಗೇರಿ ನಗರದ ಲೊಯೊಲಾ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಗದಗ ಇವರ ಸಹಯೋಗದಲ್ಲಿ ಜರುಗಿದ ಪ್ರಾಥಮಿಕ/ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 2024-25 ನೇ ಸಾಲಿನ ಪ್ರತಿಭಾ ಕಾರಂಜಿ  ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಭಾನುಶ್ರೀ. ಕೆ. ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.
ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ  ಕು. ಭಾನುಶ್ರೀ. ಕೆ. ವಿದ್ಯಾರ್ಥಿನಿಗೆ ಹಾಗೂ ಮಾರ್ಗದರ್ಶನ ನೀಡಿದ ಸಂಸ್ಕೃತ ಶಿಕ್ಷಕರಾದ ಶ್ರೀ ಪ್ರಶಾಂತ ಪಾಟೀಲ,  ಶ್ರೀ ರಘುತ್ತಮ ನಿಲೂಗಲ್ ಹಾಗೂ ಶಿಕ್ಷಕಿಯರಾದ ಕು. ಗಾಯತ್ರಿ ಅಸುಂಡಿ ಯವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ. ಬಿ. ಹುಯಿಲಗೋಳ, ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ಹುಯಿಲಗೋಳ, ಖಜಾಂಚಿ ಶ್ರೀ ಎನ್. ಬಿ. ಕಳಸಾಪುರ, ನಿರ್ದೇಶಕರಾದ ಡಾ.   ಪವನ. ಎಸ್. ಹುಯಿಲಗೋಳ, ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀ ಪ್ರತೀಕ. ಎಸ್. ಹುಯಿಲಗೋಳ, ಆಡಳಿತ ಅಧಿಕಾರಿಗಳಾದ ಡಾ. ಗಂಗೂಬಾಯಿ ಪವಾರ, ಶ್ರೀ ಪಿ. ಎಚ್. ಕಡಿವಾಲ, ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ, ಉಪ ಪ್ರಾಚಾರ್ಯರಾದ ಶ್ರೀ ಅಕ್ಷಯ್. ಜಿ. ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ಶುಭಾಶಯ ಕೋರಿದ್ದಾರೆ.