ವಿಜಯವಾಣಿ ಸುದ್ದಿಜಾಲ, ಗದಗ
ಜಿಲ್ಲೆಯಾದ್ಯಂತ ಅಲ್ಲಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ ಸುತಿಯುತ್ತಿದ್ದು, ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳ, ಉಳ್ಳಾಗಡ್ಡಿ, ಮೆಣಸಿನಕಾಯಿ ಕಟಾವಿಗೆ ಸಮಸ್ಯೆ ಎದುರಾಗಿದೆ. ನೀರಿನ ತೇವಾಂಶದಿಂದ ಬೆಳೆಗಳಿಗೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆಗೂ ಹಿನ್ನಡೆಯಾಗಿದೆ. ನಿರಂತರ ಮಳೆಯಿಂದ ರೈತರಿಗೆ ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ ಬಿತ್ತನೆ ತೊಂದರೆ ಆಗಿದೆ.
ಬಿತ್ತನೆಗೆ ಹಿನ್ನಡೆ:
ಕೃಷಿ ಇಲಾಖೆ ಹಿಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 2,56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಕಿಕೊಂಡಿತ್ತು. ನಿರಂತರ ಮಳೆಯಿಂದಾಗಿ ಬಿತ್ತನೆ ಕುಂಠಿತವಾಗಿ ಈ ವರೆಗೆ 60 ಸಾವಿರ ಹೆಕ್ಟೇರ್ ಮಾತ್ರ ಬಿತ್ತನೆ ಆಗಿದೆ. 1.49 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ, 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ, 16 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಗೋಧಿ, 15 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ, 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಗುರಿ ಹೊಂದಲಾಗಿತ್ತಾದರೂ, ನಿರೀೆಗೆ ತಕ್ಕಂತೆ ಬಿತ್ತನೆ ಆಗಿಲ್ಲ. ಕೇವಲ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದ ಸೂರ್ಯಕಾಂತಿ, ಉಳ್ಳಾಗಡ್ಡಿ, ಮೆಣಸಿನಕಾಯಿ ಕೃಷಿ ಉತ್ಪನ್ನ ಕಟಾವು ಆರಂಭವಾಗಿದೆ. ಜಿಲ್ಲೆಯಲ್ಲಿ ಉಳ್ಳಾಗಡ್ಡಿ ಬೆಳೆ ಅತೀ ಹೆಚ್ಚು ಬೆಳೆಯುತ್ತಿದ್ದು, ರೈತರು ಉತ್ತಮ ಆದಾಯ ನಿರೀೆಯಲ್ಲಿದ್ದರು. ಮಳೆಯಿಂದ ಉಳ್ಳಾಗಡ್ಡಿ ಕಟಾವು ತೊಂದರೆ ಆಗಿದೆ, ಮೆಕ್ಕೆಜೋಳ ಕಟಾವಿಗೂ ಇದೇ ಸಮಸ್ಯೆ ಎದುರಾಗಿದೆ.
ಕೋಟ್
ಜಿಲ್ಲೆಯಲ್ಲಿ ಈ ವರೆಗೆ 55 ಸಾವಿರ ಹೇಕ್ಟರ್ ಪ್ರದೇಶದಲ್ಲಿ ಕಡಲೆ ಬಿತ್ತನೆ ಆಗಿದೆ. ಕಡಲೆ ಒಳಗೊಂಡು 60 ಸಾವಿರ ಹೇಕ್ಟೆರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ. ಹಾನಿ ಪ್ರದೇಶಗಳ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಸಮೀೆ ನಡೆಸುತ್ತಿದ್ದಾರೆ. ಸದ್ಯದಲ್ಲೇ ಹಾನಿ ಬೆಳೆಗಳ ಅಂಕಿಅಂಶ ಸಿಗಲಿದೆ
ತಾರಾಮಣಿ ಜಿ. ಎಚ್., ಜಂಟಿ ಕಷಿ ನಿರ್ದೇಶಕರು