ಜಿಲ್ಲೆ

5ನೇ ದಿನಕ್ಕೆ ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿ

Gadag - Shivanand Hiremath

ಈ ಹೋರಾಟ ‘ಮಾಡು ಇಲ್ಲವೇ ಮಡಿ’ ಹೋರಾಟ: ರವಿಕಾಂತ ಅಂಗಡಿ

ಗದಗ: ಉತ್ತರ ಕರ್ನಾಟಕ ಮಹಾಸಭೆಯ ವಿವಿಧ ಬೇಡಿಕೆಗಳ ಈಡೇರಿಕೆಗೆಂದು ಗದಗ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿ ಇಂದು 5ನೇ ದಿನಕ್ಕೆ ಮುಂದುವರಿದಿದೆ. ಶಿರಹಟ್ಟಿಯ ಫಕೀರೇಶ್ವರ ಮಠದಿಂದ 30 ಕಿ.ಮೀ ಪಾದಯಾತ್ರೆ ಮಾಡಿ ಜಿಲ್ಲಾಡಳಿತ ಕಚೇರಿ ತಲುಪಿದ ಬಳಿಕ ಆರಂಭವಾದ ಈ ಧರಣಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ಧರಣಿ ಸ್ಥಳದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆಗಳನ್ನು ಇಡೇರಿಸುವವರೆಗೂ ಹೋರಾಟ ಹಿಂತೆಗೆದುಕೊಳ್ಳುವುದಿಲ್ಲ. ರೈತರು ತಲೆತಲಾಂತರಗಳಿAದ ಅರಣ್ಯ ಜಮೀನುಗಳನ್ನು ಸಾಗುವಳಿ ಮಾಡಿಕೊಂಡು ಬದುಕು ನಡೆಸುತ್ತಿದ್ದಾರೆ. ಆದರೆ ಸರ್ಕಾರ ಹಕ್ಕುಪತ್ರ ನೀಡದೇ, ರೈತರನ್ನು ಕಿರುಕುಳಕ್ಕೆ ಒಳಪಡಿಸುತ್ತಿದೆ. ಜೊತೆಗೆ ನಾಗಾವಿ ಗ್ರಾಮದಲ್ಲಿನ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಿರ್ಮಾಣಕ್ಕಾಗಿ ರೈತರ ಪೂರ್ವಜರ ಕಾಲದಿಂದ ಸಾಗುವಳಿ ಮಾಡುತ್ತಿದ್ದ ನೂರಾರು ಎಕರೆ ಕೃಷಿ ಭೂಮಿಯನ್ನು ಪರಿಹಾರ ನೀಡದೇ ಒಕ್ಕಲೇಬ್ಬಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರು ಮುಂದುವರಿದು, ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಮಾತಿನಂತೆ ನಡೆದುಕೊಳ್ಳಬೇಕು. ಜಿಲ್ಲಾಡಳಿತ ತಕ್ಷಣವೇ ನಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು. ಇಲ್ಲದಿದ್ದರೆ ದಿನದಿಂದ ದಿನಕ್ಕೆ ನಮ್ಮ ಹೋರಾಟದ ರೂಪರೇಷ ಬದಲಾಗುತ್ತಾ ತೀವ್ರಗೊಳ್ಳುತ್ತದೆ ಎಂದು ಎಚ್ಚರಿಸಿದರು.

ಧರಣಿಯನ್ನು ಬೆಂಬಲಿಸಿ ಜಯಕರ್ನಾಟಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶೀ ಚಂದ್ರಕಾAತ ಚವ್ಹಾಣ ಮಾತನಾಡುತ್ತಾ ಧರಣಿ ನಿರತರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಇಡೇರಿಸಬೇಕು, ಅವರು ತಮ್ಮ ಹಕ್ಕಿಗಾಗಿ ಹೋರಾಟವನ್ನು ಮಾಡುತ್ತಿದ್ದು, ಅವರ ಬೇಡಿಕೆಗಳು ನ್ಯಾಯಸಮ್ಮತವಾದ್ದು, ಜಿಲ್ಲಾಡಳಿತ ರೈತರ ಹೋರಾಟವನ್ನು ಕಡೆಗಣಿಸಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಜೆಡಿಎಸ್ ಮುಂಡರಾದ ಗೋಂವಿದಗೌಡ್ರು, ಕೆಆರ್‌ಎಸ್ ಪಾರ್ಟಿಯ ಪದಾಧಿಕಾರಿಗಳು ಸೇರಿದಂತೆ ಅನೇಕ ಸಂಘಟನೆಯ ಮುಖಂಡರು ಹೋರಾಟವನ್ನು ಬೆಂಬಲಿಸಿದರು.

ಈ ಸಂದರ್ಭದಲ್ಲಿ ಬಸವಣೇಪ್ಪ ಚಿಂಚಲಿ, ಎನ್.ಟಿ. ಪೂಜಾರ, ಸೇರಿದಂತೆ ಜಿಲ್ಲೆಯ ಹಲವು ರೈತ ಸಂಘಟನೆಯ ಮುಖಂಡರು ಮತ್ತು ರೈತರು ಹಾಜರಿದ್ದರು.

ಬಾಕ್ಸ್ :

ಅಹೋರಾತ್ರಿ ಧರಣಿ ನಿರತ ರೈತ ಅಸ್ವಸ್ಥ..!

ಐದು ದಿನಗಳಿಂದ ಉತ್ತರ ಕರ್ನಾಟಕ ಮಹಾಸಭೆಯ ವಿವಿಧ ಬೇಡಿಕೆಗಳ ಈಡೇರಿಕೆಗೆಂದು ಅಹೋರಾತ್ರಿ ಧರಣಿ ನಡೆಸುತ್ತಿರುವ ವೇಳೆ, ಶುಕ್ರವಾರ ಧರಣಿ ನಿರತ ರೈತನೊಬ್ಬ ಅಸ್ವಸ್ಥಗೊಂಡ ಘಟನೆ ನಡೆದಿದೆ.

ಅಸ್ವಸ್ಥ ರೈತನಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲಾವೆಂದು ಆರೋಗ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿ ಸರಿಯಾದ ಆರೋಗ್ಯ ಸೇವೆ ನೀಡಲು ಒತ್ತಾಯಿಸಿದರು.

ಕೋಟ್ :

ಈ ಹೋರಾಟ ‘ಮಾಡು ಇಲ್ಲವೇ ಮಡಿ’ ಹೋರಾಟವಾಗಿದೆ. ಇಂದಿಗೆ ನಮ್ಮ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಹಲವು ವಂಚಿತ ರೈತ ಕುಟುಂಬಗಳು ಮಳೆ, ಗಾಳಿ, ಚಳಿ ಲೆಕ್ಕಿಸದೆ ಹಗಲು-ರಾತ್ರಿ ಎನ್ನದೆ ಈ ಅಹೋರಾತ್ರಿ ಧರಣಿಯಲ್ಲಿ ಕುಳಿತಿದ್ದು, ಈ ಕುಡಲೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ನೊಂದ ರೈತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು.

- ರವಿಕಾಂತ ಅಂಗಡಿ,

ರಾಜ್ಯಾಧ್ಯಕ್ಷರು ಉತ್ತರ ಕರ್ನಾಟಕ ಮಹಾಸಭಾ.