ಗದಗ: ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ವೈದ್ಯಕಿಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಶುಕ್ರವಾರ ಭೇಟಿ ನೀಡಿದರು. ವಿಶ್ವವಿದ್ಯಾಲಯದ ಸಬರಮತಿ ಆಶ್ರಮ ಹಾಗೂ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ವೀಕ್ಷಿಸಿ, ವಿಶ್ವವಿದ್ಯಾಲಯದ ವಿವಿಧ ಚಟುವಟಿಕೆಗಳನ್ನು ಶ್ಲಾಘಿಸಿದರು. ಸಚಿವರು ವಿಶ್ವವಿದ್ಯಾಲಯದ ಶೈಕ್ಷಣಿಕ, ಸಂಶೋಧನಾ ಹಾಗೂ ಗ್ರಾಮೀಣಾಭಿವೃದ್ಧಿಯ ಉದ್ದೇಶಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ. ಆರ್. ಪಾಟೀಲ, ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರಶಾಂತ ಜೆ. ಸಿ, ಗದಗ ಜಿಮ್ಸ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಇತರರು ಇದ್ದರು.