ವಿಜಯವಾಣಿ ಸುದ್ದಿಜಾಲ ಗದಗ
ಭಾರತದ ಎಲ್ಲ ಭಾಷೆ, ಲಿಪಿಗಳನ್ನು ಅಧ್ಯಯನ ಮಾಡಿದ ಭಾಷಾ ತ ಆಚಾರ್ಯ ವಿನೋಭಾ ಭಾವೆ ಅವರು "ಕನ್ನಡ ಭಾಷೆ ವಿಶ್ವ ಭಾಷೆಗಳ ರಾಣಿ' ಎಂದು ಬಣ್ಣಿಸಿದ್ದಾರೆ. ಕನ್ನಡ ಭಾಷೆಯ ಹಿರಿಮೆ ಗರಿಮೆ ಬಹು ದೊಡ್ಡದು ಎಂದು ಗದುಗಿನ ಶಿವಾನಂದ ಬೃಹನ್ಮಠದ ಸದಾಶಿವಾನಂದ ಶ್ರಿಗಳು ಹೇಳಿದರು.
ಗದಗ ಹೆಲ್ಪಿಂಗ್ ಹ್ಯಾಂಡ್ಸ್ ೌಂಡೇಶನ್ ಹಾಗೂ ಅಪ್ಪುರಾಜ ಇವೆಂಟ್ಸ್ ಸಹಯೋಗದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ 2024 ಸಾಂಸತಿಕ ಕಾರ್ಯಕ್ರಮ ಹಾಗೂ ಸಾಧಕ ಮಹನೀಯರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅರಗಳನ್ನು ದುಂಡಾಗಿ ಬರೆಯುವ ವಿಧಾನ ಯಾವುದಾದರೂ ಭಾಷೆಯಲ್ಲಿದ್ದರೆ ಅದು ಕನ್ನಡದಲ್ಲಿ ಮಾತ್ರ. ಇಂತಹ ಭಾಷೆ ಹಲವು ಕಾರಣಗಳಿಂದಾಗಿ ಅಳಿವಿನ ಅಂಚಿನಲ್ಲಿದೆ. ಪರಿಶುದ್ಧ ಕನ್ನಡ ಮಾತನಾಡುವುದು, ಬರೆಯುವದು ಕಷ್ಟವಾಗುತ್ತಿದೆ. ಇದ್ದ ಸರ್ಕಾರಿ ಕನ್ನಡ ಶಾಲೆಗಳ ಬಾಗಿಲು ಮುಚ್ಚಿಕೊಂಡು ಕನ್ನಡ ನಾಡಿನಲ್ಲಿ ಕನ್ನಡ ಹೊರತು ಅನ್ಯಭಾಷೆಗಳ ಶಾಲೆಗಳು ತೆರೆದುಕೊಳ್ಳುತ್ತಿವೆ. ಜ್ಞಾನಾರ್ಜನೆಗೆ ಇತರ ಭಾಷೆಗಳು ಅಗತ್ಯ. ಆದರೆ ಅವುಗಳೇ ಮುಖ್ಯ ಆಗಬಾರದು. ಕನ್ನಡ ಭಾಷೆಗೆ ಮೊದಲ ಆದ್ಯತೆ ದೊರೆಯಬೇಕು. ಸುಂದರ, ಮಧುರ, ಮಂಜುಳವಾದ ಕನ್ನಡ ಭಾಷೆ ಇನ್ನಷ್ಟು ಸಮೃದ್ಧಗೊಳ್ಳಬೇಕು ಎಂದರು.
ಕನ್ನಡ ಔಪಚಾರಿಕ ಭಾಷೆಯಾಗಿ ನೇಪತ್ಯಕ್ಕೆ ಉಳಿದಿದೆ. ಭಾಷೆಯು ಸಂಸತಿಯ ವಾಹಕ. ಒಂದು ಭಾಷೆ ನಿಧಾನವಾಗಿ ನಾಶಗೊಳ್ಳುವುದಾದರೆ ಅದು ಸಂಸತಿಯನ್ನೇ ನಾಶಗೊಳಿಸಿದಂತೆ. ಆದ್ದರಿಂದ ಕನ್ನಡಿಗರಾದ ನಾವು ಶುದ್ಧ ಕನ್ನಡ ಮಾತನಾಡಬೇಕು. ಶುದ್ಧವಾಗಿ ಕನ್ನಡ ಬರೆಯಬೇಕು. ಕನ್ನಡ ಭಾಷೆ, ಸಂಸತಿಯ ಉಳಿವಿಗಾಗಿ ವೈವಿದ್ಯಮಯ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಸಾಂಸತಿಕ ಕಾರ್ಯಕ್ರಮಗಳು ಪರಿಸರದಲ್ಲಿ ನಡೆಯುತ್ತಿರಬೇಕು ಎಂದು ತಿಳಿಸಿದರು.
ಅಧ್ಯತೆ ವಹಿಸಿ ಮಾತನಾಡಿದ ಪಂಚಾಚಾರ್ಯ ಮಾಂಗಲ್ಯ ಮಂದಿರದ ಗೌರವಾಧ್ಯ ಚಂದ್ರು ಬಾಳಿಹಳ್ಳಿಮಠ, ಈ ಸಂಸ್ಥೆಯು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಸಂಯೋಜಿಸಿ ಜನಮುಖಿ, ಸಮಾಜಮುಖಿ ಕಾರ್ಯ ಮಾಡುತ್ತಿದೆ. ಈ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿವೆ ಎಂದರು.
ತಾತನಗೌಡ ಪಾಟೀಲ, ಶಿವಯ್ಯ ನಾಲತ್ವಾಡಮಠ, ರಾಜು ಗುಡಿಮನಿ, ಅಕ್ಬರಸಾಬ ಬಬಚಿರ್, ರಾಜು ಕುರಡಗಿ, ಎಸ್. ಎಚ್. ಶಿವನಗೌಡ್ರ, ಬಸವರಾಜ ತಿರ್ಲಾಪೂರ, ಸಂತೋಷ ತೋಟಗಂಟಿಮಠ, ವಿಜಯಕುಮಾರ ಹಿರೇಮಠ, ಇಾರ್ನ ಡಂಬಳ ಆಗಮಿಸಿದ್ದರು.
ಬಾಕ್ಸ್:
ಕನ್ನಡ ರತ್ನ ಪ್ರಶಸ್ತಿ:
ಸಮಾರಂಭದಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಜಿ. ಬಿ. ಬಿಡಿನಹಾಳ ಅವರಿಗೆ, ವಿದ್ಯಾಥಿರ್ಗಳ ಶಿಣಕ್ಕಾಗಿ ತಮ್ಮ ಸ್ವಂತ ಜಮೀನನ್ನೆ ಶಾಲೆ ನಿರ್ಮಾಣಕ್ಕೆ ದಾನ ನೀಡಿದ ಕೊಪ್ಪಳದ ಕುಣಿಕೇರಿಯ ಹುಚ್ಚಮ್ಮ, ಶಿರಹಟ್ಟಿಯ ರಿಯಾಜ್ ಅಹ್ಮದ್ ಡಾಲಾಯತ್, ಸಮಾಜ ಸೇವಕ ಡಾ. ಆರ್. ಜೆ. ರಶೀದ್, ಬಾಲಪ್ರತಿಭೆ ಅನುಷಾ ಹಿರೇಮಠ ಅವರಿಗೆ ಕನ್ನಡ ರತ್ನ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.