ಜಿಲ್ಲೆ

ಸಕಾಲ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

Gadag - Shivanand Hiremath

ಗದಗ: ಸಕಾಲ ಯೋಜನೆಯಡಿ ಸ್ವೀಕರಿಸಿದ ಅಜಿರ್ಗಳ ವಿಲೇವಾರಿಯಲ್ಲಿ ವಿನಾ ಕಾರಣ ವಿಳಂಬ ಆಗಬಾರದು ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ಸಕಾಲದಲ್ಲಿ ಅಜಿರ್ ಸ್ವೀಕರಿಸುವಾಗ ಅಜಿರ್ಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸಕಾಲ ಯೋಜನೆಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅಜಿರ್ಗಳನ್ನು ಸ್ವೀಕರಿಸಬೇಕು. ಕೆಲವು ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಅಜಿರ್ಗಳ ವಿಲೇವಾರಿಗೆ ಕ್ರಮ ವಹಿಸಬೇಕು ಎಂದರು. ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ಉದ್ದೇಶದಿಂದ ಸಕಾಲ ಜಾರಿಗೊಳಿಸಲಾಗಿದೆ. ಈ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆ ಶಸ್ವಿಗೊಳಿಸಬೇಕು ಎಂದರು. ಸಕಾಲ ಯೋಜನೆ ಜಿಲ್ಲಾ ಮಟ್ಟದ ಸಭೆಗೆ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಆರೋಗ್ಯ, ಕೃಷಿ. ಕಾಮಿರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿಗಳು ಸಕಾಲ ಅಜಿರ್ಗಳ ಕುರಿತು ಹೆಚ್ಚಿನ ಶ್ರಮ ವಹಿಸಿ ಶ್ರೀ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಸ್ವೀಕರಿಸಿದ ಅಜಿರ್ಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದರೆ, ಇಲಾಖೆಯ ಅಧಿಕಾರಿಗಳೇ ಹೊಣೆಗಾರ ಆಗುತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್​. ಶ್ರಿಧರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಸಿಇಓ ಭರತ್​ ಎಸ್​, ಅಪರ ಜಿಲ್ಲಾಧಿಕಾರಿ ಅನ್ನರ್ಪೂಣ ಎಂ, ಜಿಪಂ ಉಪಕಾರ್ಯದಶಿರ್ ಸಿ. ಆರ್​. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ, ಯುವಜನ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಇತರರು ಇದ್ದರು.