ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳೊದಿಗೆ ಸಮಾಲೋಚನಾ ಸಭೆಯು ಮಂಗಳವಾರ ಜರುಗಿತು.
ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಕಾರ್ಮಿಕರಿಗೆ ಯಾವುದಾದರೂ ರೀತಿಯ ಅಪಘಾತ ಸಂಭವಿಸಿದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅದನ್ನು ಮರುಪಾವತಿಸುವ ಅವಕಾಶವಿರುತ್ತದೆ ಈ ಅವಕಾಶವನ್ನು ತಾಲೂಕಿನಲ್ಲಿರುವ ಖಾಸಗಿ ಆಸ್ಪತ್ರೆಗಳಿಗೂ ಸಹ ನೀಡಬೇಕೆಂದು ಓರ್ವ ಕಾರ್ಮಿಕರು ಸಭೆಯಲ್ಲಿ ತಿಳಿಸಿದರು.
ಇದಕ್ಕೆ ಪ್ರತಿಕ್ರಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಖಾಸಗಿ ಆಸ್ಪತ್ರೆಯನ್ನು ಗುರುತಿಸಲು ಅದರದೇ ಆದ ನಿಯಮಗಳಿವೆ. ಆ ನಿಯಮಗಳಿಗೆ ಒಳಪಡುವ ಯಾವುದಾದರೂ ಖಾಸಗಿ ಆಸ್ಪತ್ರೆ ಟೆಂಡರ್‌ನ ನಿಯಮಗಳು ಹಾಗೂ ಷರತ್ತಿಗಳಿಗನುಸಾರ ಭಾಗವಹಿಸಿದರೆ ಮಾತ್ರ ಅವಕಾಶ ನೀಡಲಾಗುವುದೆಂದು ಉತ್ತರಿಸಿದರು.
ರೈತರು ಸಹ ಕಾರ್ಮಿಕರಾಗಿದ್ದು ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಹಾವಿನಿಂದ ಅಥವಾ ಇನ್ನು ಯಾವುದೇ ಕೀಟದಿಂದ ಅಪಘಾತ ಸಂಭವಿಸಿದಾಗ ಅವರಿಗೂ ಸಹ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳನ್ನು ನೀಡಬೇಕೆಂದು ರೈತರು ಸಚಿವರಿಗೆ ಕೇಳಿದಾಗ ಇದಕ್ಕೆ ಉತ್ತರಿಸಿದ ಸಚಿವರು ರೈತರು ಅಸಂಘಟಿತ ವಲಯಕ್ಕೆ ಸೇರಿದವರಾಗಿದ್ದು ಸೆಸ್ ಅನುದಾನವನ್ನು ಬಳಸಲು ಅವಕಾಶವಿಲ್ಲದ ಕಾರಣ ಸಂಘಟಿತ ವರ್ಗಕ್ಕೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಹ ಅಸಂಘಟಿತ ರೈತರಿಗೂ ಸಹ ಎಲ್ಲಾ ಸೌಲಭ್ಯಗಳು ಸಿಗುವ ರೀತಿ ಸಿಗುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಪ್ರತಿಕ್ರಿಯಿಸಿದರು.
ಕಾರ್ಮಿಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕೆಂದು ಕಾರ್ಮಿಕರು ಸಚಿವರಿಗೆ ಕೇಳಿಕೊಂಡಾಗ ಕಾರ್ಮಿಕ ಸಚಿವರು ಅಂತರಾಷ್ಟಿçÃಯ ಮಟ್ಟದಲ್ಲಿ ನ ಕೌಶಲ್ಯ ತರಬೇತಿಗಳನ್ನು ಜಿಲ್ಲಾ ಮಟ್ಟದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಪ್ರಾರಂಭಿಸಲು ಚರ್ಚಿಸಲಾಗುವುದು ಎಂದರು.
ಕೆಲವೊಂದು ಕಾರ್ಮಿಕರ ಅಹವಾಲುಗಳನ್ನು ಸ್ವೀಕರಿಸಿ ಮತ್ತು ಸ್ಥಳದಲ್ಲಿಯೇ ಇತ್ಯರ್ಥಗೊಳಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ, ಶಾಸಕರಾದ ಜಿ.ಎಸ್.ಪಾಟೀಲ, ಡಾ.ಚಂದ್ರು ಲಮಾಣಿ, ಎಸ್.ವಿ.ಸಂಕನೂರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಸೇರಿದಂತೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಡಿ, ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಹೆಚ್ಚುವರಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ.ರವಿಕುಮಾರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಹಾಗೂ ಇತರ ಅಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು